ಬೆಂಗಳೂರು: ಇದೇ 16ರಂದು ನಡೆಯಲಿರುವ ವಿಧಾನ ಪರಿಷತ್ತಿನ ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆಯ ಮತದಾನದ ಮುನ್ನ 48 ಗಂಟೆಗಳ ಅವಧಿಯಲ್ಲಿ ಮದ್ಯ ಮಾರಾಟಕ್ಕೆ ನಿಷೇಧ ಹೇರಿದ್ದ ಬೆಂಗಳೂರು ನಗರ ಜಿಲ್ಲಾಧಿಕಾರಿ ಆದೇಶವನ್ನು ಮಾರ್ಪಾಡು ಮಾಡಿ ಹೈಕೋರ್ಟ್ ಆದೇಶಿಸಿದೆ.

ಬೆಂಗಳೂರು ನಗರ ಜಿಲ್ಲಾಧಿಕಾರಿ ಇದೇ 1ರಂದು ಹೊರಡಿಸಿರುವ ಆದೇಶವನ್ನು ಪ್ರಶ್ನಿಸಿ ಬೃಹತ್ ಬೆಂಗಳೂರು ಹೋಟೆಲ್ಗಳ ಸಂಘಟನೆ ಕಾರ್ಯದರ್ಶಿ ವೀರೇಂದ್ರ ಎನ್. ಕಾಮತ್ ಸೇರಿದಂತೆ ಒಟ್ಟು ನಾಲ್ವರು ಸಲ್ಲಿಸಿದ್ದ ರಿಟ್ ಅರ್ಜಿಯನ್ನು ಬುಧವಾರ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಸ್.ಆರ್.ಕೃಷ್ಣಕುಮಾರ್ ಅವರಿದ್ದ ಏಕಸದಸ್ಯ ನ್ಯಾಯಪೀಠ, ಮದ್ಯ ಮಾರಾಟ ನಿಷೇಧವನ್ನು ಮತದಾನದ ಮತ್ತು ಮತ ಎಣಿಕೆಯ ದಿನಕ್ಕೆ ಮಾತ್ರವೇ ಸೀಮಿತಗೊಳಿಸಿ ಆದೇಶಿಸಿದೆ.

‘ಮತದಾರರು ಶಿಕ್ಷಕರಾಗಿದ್ದು, ಮದ್ಯ ಮಾರಾಟ ನಿರ್ಬಂಧಿಸದೇ ಹೋದರೆ ಶಿಕ್ಷಕರು ಮದ್ಯ ಸೇವಿಸುತ್ತಾರೆ ಎಂದು ಭಾವಿಸಬೇಕಿಲ್ಲ. ಮುಕ್ತ ಹಾಗೂ ನ್ಯಾಯಸಮ್ಮತ ಮತದಾನಕ್ಕೆ 48 ಗಂಟೆಗಳ ನಿರ್ಬಂಧ ಅಗತ್ಯವಿಲ್ಲ’ ಎಂದು ನ್ಯಾಯಪೀಠ ಅಭಿಪ್ರಾಯಪಟ್ಟಿದೆ.

ಉಪ ಚುನಾವಣೆ ಹಿನ್ನೆಲೆಯಲ್ಲಿ ಇದೇ 14ರಂದು ಸಂಜೆ 5ರಿಂದ ಮತದಾನ ನಡೆಯುವ ಇದೇ 16ರ ಮಧ್ಯರಾತ್ರಿ 12ರವರೆಗೆ ಮತ್ತು ಮತ ಎಣಿಕೆ ದಿನವಾದ ಇದೇ 20ರಂದು ಬೆಳಗ್ಗೆ 6 ರಿಂದ ಮಧ್ಯರಾತ್ರಿ 12 ಗಂಟೆಯವರೆಗೆ ಬೆಂಗಳೂರು ನಗರ ಮತ್ತು ನಗರದ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿನ ಸಗಟು ಮತ್ತು ಚಿಲ್ಲರೆ ಮದ್ಯ ಮಾರಾಟ ಮಳಿಗೆಗಳನ್ನು ಮುಚ್ಚಲು ಜಿಲ್ಲಾಧಿಕಾರಿ ಹಾಗೂ ಪೊಲೀಸ್ ಆಯುಕ್ತರು ಹೊರಡಿಸಿದ್ದ ಆದೇಶವನ್ನು ಪ್ರಶ್ನಿಸಲಾಗಿತ್ತು.

ಅರ್ಜಿದಾರರ ಪರ ಹಿರಿಯ ವಕೀಲ ಎಂ.ಅರುಣ್ ಶ್ಯಾಮ್ ಹಾಗೂ ರಾಜ್ಯ ಸರ್ಕಾರದ ಪರ ಹೆಚ್ಚುವರಿ ಅಡ್ವೊಕೇಟ್ ಜನರಲ್ ಪ್ರತಿಮಾ ಹೊನ್ನಾಪುರ ಹಾಜರಾಗಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.