ಗುರುವಾರ, 25 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಮದ್ಯದ ದರ ಏರಿಕೆಗೆ ಹೊಸ ಪ್ರಸ್ತಾವನೆ?

Published 26 ಜೂನ್ 2024, 16:23 IST
Last Updated 26 ಜೂನ್ 2024, 16:23 IST
ಅಕ್ಷರ ಗಾತ್ರ

ಬೆಂಗಳೂರು: ಮದ್ಯದ ದರ ಅಲ್ಪ ಪ್ರಮಾಣದಲ್ಲಿ ಏರಿಕೆ ಮಾಡಲು ಮುಖ್ಯಮಂತ್ರಿಯವರಿಗೆ ಪ್ರಸ್ತಾವನೆ ಸಲ್ಲಿಸಲು ಅಬಕಾರಿ ಇಲಾಖೆ ಸಿದ್ಧತೆ ನಡೆಸಿದೆ.

ಯಾವ ವರ್ಗದ ಮದ್ಯದ ದರ ಎಷ್ಟು ಪ್ರಮಾಣದಲ್ಲಿ ಪರಿಷ್ಕರಣೆ ಮಾಡಬೇಕು ಎಂಬುದು ಮುಂಬರುವ ದಿನಗಳಲ್ಲಿ ಗೊತ್ತಾಗಲಿದೆ ಎಂದು ಅಬಕಾರಿ ಇಲಾಖೆ ಮೂಲಗಳು ತಿಳಿಸಿವೆ.

ಈ ಕುರಿತು ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅಬಕಾರಿ ಸಚಿವ ಆರ್‌.ಬಿ.ತಿಮ್ಮಾಪುರ, ‘ಮದ್ಯದ ದರ ಏರಿಸುವ ಸಂಬಂಧ ಸದ್ಯಕ್ಕೆ ಯಾವುದೇ ತೀರ್ಮಾನ ತೆಗೆದುಕೊಂಡಿಲ್ಲ. ಇಲಾಖೆಗೆ ₹38 ಸಾವಿರ ಕೋಟಿ ಆದಾಯ ಸಂಗ್ರಹದ ಗುರಿ ನಿಗದಿ ಮಾಡಲಾಗಿದೆ. ಆದರೆ, ದರ ಹೆಚ್ಚಿಸುವ ಉದ್ದೇಶವಿಲ್ಲ’ ಎಂದರು.

‘ಗ್ಯಾರಂಟಿ ಯೋಜನೆ ಮುನ್ನಡೆಸುವ ಉದ್ದೇಶಕ್ಕಾಗಿ ಮದ್ಯದ ದರ ಏರಿಸಬೇಕೆಂದೇನೂ ಇಲ್ಲ. ನೆರೆಯ ರಾಜ್ಯಗಳಲ್ಲಿ ಮದ್ಯದ ದರಗಳ ಮಾಹಿತಿಯನ್ನು ಸಂಗ್ರಹಿಸಲಾಗುತ್ತಿದೆ’ ಎಂದೂ ಅವರು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT