ಶನಿವಾರ, 24 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಜ್ಯದಲ್ಲಿ ಮದ್ಯದ ದರ ಹೆಚ್ಚಿಸಿಲ್ಲ: ಸಚಿವ ತಿಮ್ಮಾಪುರ

Published 2 ಜನವರಿ 2024, 16:10 IST
Last Updated 2 ಜನವರಿ 2024, 16:10 IST
ಅಕ್ಷರ ಗಾತ್ರ

ಬೆಂಗಳೂರು: ‘ರಾಜ್ಯದಲ್ಲಿ ಯಾವುದೇ ಮದ್ಯದ ದರವನ್ನು ಸರ್ಕಾರ ಹೆಚ್ಚು ಮಾಡಿಲ್ಲ. ತೆರಿಗೆಯನ್ನೂ ಹೆಚ್ಚಿಸಿಲ್ಲ’ ಎಂದು ಅಬಕಾರಿ ಸಚಿವ ಆರ್‌.ಬಿ. ತಿಮ್ಮಾಪುರ ಸ್ಪಷ್ಟಪಡಿಸಿದರು.

ಸುದ್ದಿಗಾರರ ಜೊತೆ ಮಂಗಳವಾರ ಮಾತನಾಡಿದ ಅವರು, ‘ಮದ್ಯದ ಮೇಲಿನ ತೆರಿಗೆ ಹೆಚ್ಚಿಸುವುದಾದರೆ ಮೊದಲೇ ತಿಳಿಸಲಾಗುತ್ತದೆ’ ಎಂದರು.

‘ಮದ್ಯ ಮಾರಾಟದಿಂದ ಹೆಚ್ಚಿನ ಆದಾಯ ನಿರೀಕ್ಷೆ ಇದೆ. ಗ್ರಾಹಕರಿಗೆ ಉತ್ತಮ ಗುಣಮಟ್ಟದ ಮದ್ಯ ಪೂರೈಸಲು ನಾವು ಪ್ರಯತ್ನಿಸುತ್ತೇವೆ’ ಎಂದ ಅವರು, ‘ಬಜೆಟ್‌ನಲ್ಲಿ ಮದ್ಯದ ಮೇಲಿನ ತೆರಿಗೆಯನ್ನು ಹೆಚ್ಚಿಸುವ ಪ್ರಸ್ತಾವವೂ ಸದ್ಯಕ್ಕಿಲ್ಲ’ ಎಂದೂ ತಿಳಿಸಿದರು. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT