ಬುಧವಾರ, 8 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

13 ನಗರ ಸ್ಥಳೀಯ ಸಂಸ್ಥೆಗಳ ಮೀಸಲು ಪಟ್ಟಿಗೆ ಹಸಿರು ನಿಶಾನೆ

Last Updated 31 ಮೇ 2019, 20:17 IST
ಅಕ್ಷರ ಗಾತ್ರ

ಬೆಂಗಳೂರು: ಮಂಗಳೂರು ಮಹಾನಗರ ಪಾಲಿಕೆ ಸೇರಿದಂತೆ ರಾಜ್ಯದ 13 ನಗರಗಳ ಸ್ಥಳೀಯ ಸಂಸ್ಥೆಗಳಿಗೆ ನಿಗದಿಪಡಿಸಿದ್ದ ವಾರ್ಡ್‌ವಾರು ಮೀಸಲು ಪಟ್ಟಿಯನ್ನು ಹೈಕೋರ್ಟ್‌ ಎತ್ತಿ ಹಿಡಿದಿದೆ.

‘ಮೀಸಲು ಪಟ್ಟಿ ರದ್ದುಪಡಿಸಿ, ರೀ–ಡೂ ಮಾಡಬೇಕು’ ಎಂದು ನಿರ್ದೇಶಿಸಿದ್ದ ಏಕಸದಸ್ಯ ನ್ಯಾಯಪೀಠದ ಆದೇಶವನ್ನು ನ್ಯಾಯಮೂರ್ತಿ ಎಲ್.ನಾರಾಯಣ ಸ್ವಾಮಿ ಮತ್ತು ನ್ಯಾಯಮೂರ್ತಿ ಪಿ.ಎಸ್.ದಿನೇಶ್ ಕುಮಾರ್ ಅವರಿದ್ದ ವಿಭಾಗೀಯ ನ್ಯಾಯಪೀಠ ಶುಕ್ರವಾರ ರದ್ದುಗೊಳಿಸಿ ಆದೇಶಿಸಿದೆ.

‘ನಿಕಟಪೂರ್ವ ಜನಗಣತಿ ಆಧರಿಸಿ ಮೀಸಲಾತಿ ನಿಗದಿಪಡಿಸಬೇಕು ಎಂಬ ಸುಪ್ರೀಂ ಕೋರ್ಟ್ ತೀರ್ಪಿನ ಅನ್ವಯ ರಾಜ್ಯ ಸರ್ಕಾರದ ಕ್ರಮ ಸರಿಯಾಗಿದೆ’ ಎಂದು ನ್ಯಾಯಪೀಠ ಅಭಿಪ್ರಾಯಪಟ್ಟಿದೆ.

ವಿವಿಧ ಸ್ಥಳೀಯ ಸಂಸ್ಥೆಗಳ ವಾರ್ಡ್‌ವಾರು ಮೀಸಲಾತಿ ಹಾಗೂ ಕ್ಷೇತ್ರ ಪುನರ್ವಿಂಗಡಣೆ ಮಾಡಿ ರಾಜ್ಯ ಸರ್ಕಾರ 2018ರ ಆಗಸ್ಟ್‌ 10ರಂದು ಅಧಿಸೂಚನೆ ಹೊರಡಿಸಿತ್ತು. ಈ ಅಧಿಸೂಚನೆಗೆ ತಕರಾರು ಉದ್ಭವಿಸಿತ್ತು. ಪ್ರಕರಣದ ವಿಚಾರಣೆ ನಡೆಸಿದ್ದ ಏಕಸದಸ್ಯ ನ್ಯಾಯಪೀಠ, ‘13 ಸಂಸ್ಥೆಗಳ ಪರಿಷ್ಕೃತ ಪಟ್ಟಿ 2019ರ ಜನವರಿ 28ರೊಳಗೆ ರಾಜ್ಯ ಚುನಾವಣಾ ಆಯೋಗಕ್ಕೆ ಸಲ್ಲಿಸಬೇಕು‘ ಎಂದು ರಾಜ್ಯ ಸರ್ಕಾರಕ್ಕೆ ನಿರ್ದೇಶಿಸಿತ್ತು. ಈ ಆದೇಶ ರದ್ದುಪಡಿಸಬೇಕು ಎಂದು ಕೋರಿ ರಾಜ್ಯ ಸರ್ಕಾರ ಮೇಲ್ಮನವಿ ಸಲ್ಲಿಸಿತ್ತು.

ತಕರಾರಿಗೆ ಒಳಗಾಗಿದ್ದ ಕ್ಷೇತ್ರಗಳು: ‘ಮಂಗಳೂರು ಮಹಾನಗರ ಪಾಲಿಕೆ, ಚಿಕ್ಕಮಗಳೂರು, ರಾಮನಗರ, ದೊಡ್ಡಬಳ್ಳಾಪುರ, ಶಿರಾ, ಮಡಿಕೇರಿ, ಭದ್ರಾವತಿ ನಗರಸಭೆಗಳು, ಚನ್ನಪಟ್ಟಣ, ವಿಜಯಪುರ, ತರೀಕೆರೆ, ಬೇಲೂರು ಪುರಸಭೆಗಳು, ಗುಡಿಬಂಡೆ ಹಾಗೂ ತೀರ್ಥಹಳ್ಳಿ ಪಟ್ಟಣ ಪಂಚಾಯಿತಿಗಳ ವಾರ್ಡ್‌ವಾರು ಮೀಸಲಾತಿ ಪ್ರಕ್ರಿಯೆಯನ್ನು ರೀ–ಡೂ ಮಾಡಬೇಕು’ ಎಂದು ನ್ಯಾಯಪೀಠ ಆದೇಶಿಸಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT