ಬೆಂಗಳೂರು: ರಾಜ್ಯದಾದ್ಯಂತ ಇದೇ 8ರಂದು ನಡೆದ 2025ನೇ ಸಾಲಿನ ಮೊದಲ ರಾಷ್ಟ್ರೀಯ ಲೋಕ ಅದಾಲತ್ನಲ್ಲಿ ನ್ಯಾಯಾಲಯದಲ್ಲಿ ಬಾಕಿಯಿದ್ದ ಹಾಗೂ ವ್ಯಾಜ್ಯ ಪೂರ್ವ ಪ್ರಕರಣಗಳೂ ಸೇರಿದಂತೆ ಒಟ್ಟು 41 ಲಕ್ಷಕ್ಕೂ ಹೆಚ್ಚು ಪ್ರಕರಣಗಳನ್ನು ರಾಜಿ ಸಂಧಾನದ ಮೂಲಕ ಇತ್ಯರ್ಥಪಡಿಸಲಾಗಿದೆ.

ಈ ಕುರಿತ ಅಂಕಿಅಂಶಗಳನ್ನು ‘ಕರ್ನಾಟಕ ಕಾನೂನು ಸೇವೆಗಳ ಪ್ರಾಧಿಕಾರ’ದ ಕಾರ್ಯನಿವಾರ್ಹಕ ಅಧ್ಯಕ್ಷರೂ ಆದ ಹೈಕೋರ್ಟ್ನ ಹಿರಿಯ ನ್ಯಾಯಮೂರ್ತಿ ವಿ.ಕಾಮೇಶ್ವರ್ ರಾವ್ ಮತ್ತು ಶ್ರೀನಿವಾಸ ಹರೀಶ್ ಕುಮಾರ್ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ವಿವರಿಸಿದರು.

‘ಬೆಂಗಳೂರಿನ ಐದು, ಧಾರವಾಡದ 4 ಮತ್ತು ಕಲಬುರಗಿಯ 2 ಪೀಠಗಳು ಕಾರ್ಯನಿರ್ವಹಿಸಿ ಒಟ್ಟು 963 ಪ್ರಕರಣಗಳನ್ನು ಇತ್ಯರ್ಥಪಡಿಸಿವೆ. ಜಿಲ್ಲಾ ಮತ್ತು ತಾಲ್ಲೂಕು ನ್ಯಾಯಾಲಯಗಳಲ್ಲಿ 994 ಅದಾಲತ್ ನಡೆಸಲಾಗಿದೆ. ಆ ಮೂಲಕ ಒಟ್ಟು 1,005 ಪೀಠಗಳು ಅದಾಲತ್ ನಡೆಸಿ ನ್ಯಾಯಾಲಯದಲ್ಲಿ ಬಾಕಿಯಿದ್ದ 2,59,270 ಪ್ರಕರಣಗಳು ಮತ್ತು ವ್ಯಾಜ್ಯ ಪೂರ್ವ 39,22,498 ಪ್ರಕರಣಗಳೂ ಸೇರಿದಂತೆ ಒಟ್ಟು 41,81,768 ಪ್ರಕರಣಗಳನ್ನು ಇತ್ಯರ್ಥಪಡಿಸಲಾಗಿದೆ. ಒಟ್ಟು ₹2,345 ಕೋಟಿ ಮೊತ್ತವನ್ನು ಪರಿಹಾರ ರೂಪದಲ್ಲಿ ಕೊಡಿಸಲಾಗಿದೆ’ ಎಂದು ಮಾಹಿತಿ ನೀಡಿದರು.

‘ಈ ಬಾರಿಯ ಅದಾಲತ್ನಲ್ಲಿ 5 ವರ್ಷ ಮತ್ತು ಅದಕ್ಕೂ ಹಳೆಯದಾದ 1,457 ಮತ್ತು 10 ವರ್ಷ ಹಾಗೂ ಅದಕ್ಕೂ ಹಳೆಯದಾದ 212 ಪ್ರಕರಣಗಳು, 15 ವರ್ಷ ಮತ್ತು ಅದಕ್ಕೂ ಹಳೆಯದಾದ 37 ಮತ್ತು ಬೆಂಗಳೂರಿನ 8ನೇ ಎಸಿಎಂಎಂ ನ್ಯಾಯಾಲಯದಲ್ಲಿ 28 ವರ್ಷಗಳಷ್ಟು ಹಳೆಯದಾದ ಕ್ರಿಮಿನಲ್ ಪ್ರಕರಣವನ್ನು ರಾಜಿ ಸಂಧಾನದ ಮೂಲಕ ಇತ್ಯರ್ಥಪಡಿಸಿರುವುದು ವಿಶೇಷವಾಗಿದೆ. 1,540 ಪ್ರಕರಣಗಳಲ್ಲಿ ಹಿರಿಯ ನಾಗರಿಕರು ತಮ್ಮ ವ್ಯಾಜ್ಯಗಳನ್ನು ಪರಿಹರಿಸಿಕೊಂಡಿದ್ದಾರೆ’ ಎಂದು ನ್ಯಾಯಮೂರ್ತಿಗಳು ಸಂತಸ ವ್ಯಕ್ತಪಡಿಸಿದರು.

‘11,408 ಚೆಕ್ ಬೌನ್ಸ್ ಪ್ರಕರಣಗಳನ್ನು ವಿಲೇವಾರಿ ಮಾಡಲಾಗಿದೆ. 455 ಎಲ್ಎಸಿ ಅಮಲ್ಜಾರಿ ಪ್ರಕರಣಗಳನ್ನು ಇತ್ಯರ್ಥಪಡಿಸಿ, ₹123 ಕೋಟಿ ಪರಿಹಾರ ಕಲ್ಪಿಸಲಾಗಿದೆ. 784 ಎಂವಿಸಿ ಅಮಲ್ಜಾರಿ ಪ್ರಕರಣಗಳನ್ನು ₹69 ಕೋಟಿ ಪರಿಹಾರ ಮೊತ್ತಕ್ಕೆ ಇತ್ಯರ್ಥಪಡಿಸಲಾಗಿದೆ. ಅಂತೆಯೇ, 3,279 ಇತರೆ ಅಮಲ್ಜಾರಿ ಪ್ರಕರಣ ಇತ್ಯರ್ಥಪಡಿಸಲಾಗಿದ್ದು, ₹109 ಕೋಟಿ ಪರಿಹಾರ ಒದಗಿಸಲಾಗಿದೆ’ ಎಂದು ವಿವರಿಸಿದರು.

‘67 ಗ್ರಾಹಕರ ವ್ಯಾಜ್ಯ ಪ್ರಕರಣಗಳನ್ನು ಇತ್ಯರ್ಥಪಡಿಸಲಾಗಿದ್ದು, ₹2.59 ಕೋಟಿ ಪರಿಹಾರ ನೀಡಲಾಗಿದೆ. ರಿಯಲ್ ಎಸ್ಟೇಟ್ಗೆ ಸಂಬಂಧಿಸಿದಂತೆ ರೇರಾ ಮುಂದೆ ಬಾಕಿಯಿದ್ದ 40 ಪ್ರಕರಣಗಳನ್ನು ₹2.6 ಕೋಟಿಗೆ, ಸಾಲ ವಸೂಲಾತಿ ನ್ಯಾಯಮಂಡಳಿಯಲ್ಲಿನ 411 ಪ್ರಕರಣಗಳನ್ನು ₹195 ಕೋಟಿ ಪರಿಹಾರ ಮೊತ್ತಕ್ಕೆ ಇತ್ಯರ್ಥ ಮಾಡಲಾಗಿದೆ’ ಎಂದು ತಿಳಿಸಿದರು.

‘ಬೆಂಗಳೂರು ನಗರ ಜಿಲ್ಲೆಯ ಲಘು ವ್ಯಾಜ್ಯಗಳ ನ್ಯಾಯಾಲಯದಲ್ಲಿ (ಸಿಸಿಎಚ್-1) ಎಂವಿಸಿ ಪ್ರಕರಣವೊಂದನ್ನು ₹1.20 ಕೋಟಿಗೆ, ಸಿಸಿಚ್-25ರಲ್ಲಿನ ಪ್ರಕರಣವೊಂದನ್ನು ₹1.80 ಕೋಟಿಗೆ, ಸಿಸಿಎಚ್-4ರಲ್ಲಿನ ಪ್ರಕರಣವೊಂದನ್ನು ₹1.49 ಕೋಟಿ ಪರಿಹಾರ ಮೊತ್ತಕ್ಕೆ ಇತ್ಯರ್ಥಪಡಿಸಲಾಗಿದೆ. ಬೆಂಗಳೂರು ಜಿಲ್ಲೆಯಲ್ಲಿ ಎರಡು ಪ್ರತ್ಯೇಕ ಚೆಕ್ ಬೌನ್ಸ್ಗಳನ್ನು ಕ್ರಮವಾಗಿ ₹3 ಕೋಟಿ ಮತ್ತು ₹5.81 ಕೋಟಿ ಮೊತ್ತಕ್ಕೆ ವಿಲೇವಾರಿ ಮಾಡಲಾಗಿದೆ’ ಎಂದು ಮಾಹಿತಿ ನೀಡಿದರು.

ಕಾನೂನು ಸೇವೆಗಳ ರಾಜ್ಯ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಎಂ.ಎಲ್.ರಘುನಾಥ್, ಉಪ ಕಾರ್ಯದರ್ಶಿ ಎಂ.ಶ್ರೀಧರ್ ಮತ್ತು ಸಾರ್ವಜನಿಕ ಸಂಪರ್ಕಾಧಿಕಾರಿ ಪಿ.ಎಂ.ಬಾಲಸುಬ್ರಮಣಿ ಇದ್ದರು.

* 1,966 ವೈವಾಹಿಕ ಪ್ರಕರಣ ಇತ್ಯರ್ಥ

* ಪುನಃ ಒಂದಾದ 355 ದಂಪತಿಗಳು

* 4,204 ಎಂವಿಸಿ ಪ್ರಕರಣ ಇತ್ಯರ್ಥ: ₹268 ಕೋಟಿ ಪರಿಹಾರ

* 3,247 ವಿಭಾಗ ದಾವೆ ವಿಲೇವಾರಿ

2ನೇ ರಾಷ್ಟ್ರೀಯ ಲೋಕ ಅದಾಲತ್ ಮೇ 10ಕ್ಕೆ

‘2025ನೇ ಸಾಲಿನ ಎರಡನೇ ರಾಷ್ಟ್ರೀಯ ಲೋಕ ಅದಾಲತ್ ಅನ್ನು ಮೇ 10ರಂದು ನಡೆಸಲು ತೀರ್ಮಾನಿಸಲಾಗಿದೆ. ವ್ಯಾಜ್ಯದಾರರು ಆ ಅದಲಾತ್ನಲ್ಲಿ ಭಾಗವಹಿಸಿ ತಮ್ಮ ಪ್ರಕರಣಗಳನ್ನು ರಾಜೀ ಸಂಧಾನದ ಮೂಲಕ ತ್ವರಿತವಾಗಿ ಇತ್ಯರ್ಥಪಡಿಸಿಕೊಳ್ಳಲು ಅವಕಾಶವಿದೆ’ ಎಂದು ನ್ಯಾಯಮೂರ್ತಿ ವಿ.ಕಾಮೇಶ್ವರ್ ರಾವ್ ಅವರು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.