ಶನಿವಾರ, 4 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಿಎಂ, ಡಿಸಿಎಂ ಭೇಟಿಯಾದ ಬಿಜೆಪಿ ಮುಖಂಡ ರೇಣುಕಾಚಾರ್ಯ: ರಾಜಕೀಯ ವಲಯದಲ್ಲಿ ಚರ್ಚೆ

Published 25 ಆಗಸ್ಟ್ 2023, 16:08 IST
Last Updated 25 ಆಗಸ್ಟ್ 2023, 16:08 IST
ಅಕ್ಷರ ಗಾತ್ರ

ಬೆಂಗಳೂರು: ಹೊನ್ನಾಳಿ ಕ್ಷೇತ್ರದ ಮಾಜಿ ಶಾಸಕ, ಬಿಜೆಪಿ ಮುಖಂಡ ಎಂ.ಪಿ. ರೇಣುಕಾಚಾರ್ಯ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಅವರನ್ನು ಶುಕ್ರವಾರ ಭೇಟಿಮಾಡಿ, ಮಾತುಕತೆ ನಡೆಸಿದರು.

ರೇಣುಕಾಚಾರ್ಯ ಬಿಜೆಪಿ ತೊರೆದು ಕಾಂಗ್ರೆಸ್‌ ಸೇರಿ, ದಾವಣಗೆರೆ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಲು ಪ್ರಯತ್ನಿಸುತ್ತಿದ್ದಾರೆ ಎಂಬ ಸುದ್ದಿ ರಾಜಕೀಯ ವಲಯದಲ್ಲಿ ಚರ್ಚೆಯಲ್ಲಿದೆ. ವಿಧಾನಸಭಾ ಚುನಾವಣೆಯಲ್ಲಿನ ಸೋಲಿನ ಬಳಿಕ ಬಿಜೆಪಿಯ ಕೆಲವು ನಾಯಕರ ವಿರುದ್ಧ ಬಹಿರಂಗವಾಗಿ ಹೇಳಿಕೆಯನ್ನೂ ನೀಡಿದ್ದರು. ಪಕ್ಷದ ಶಿಸ್ತು ಸಮಿತಿಯಿಂದ ಅವರಿಗೆ ನೋಟಿಸ್‌ ಜಾರಿ ಮಾಡಲಾಗಿತ್ತು.

ಸಿದ್ದರಾಮಯ್ಯ ಅವರನ್ನು ಶುಕ್ರವಾರ ಮಧ್ಯಾಹ್ನ ಭೇಟಿಮಾಡಿದ ರೇಣುಕಾಚಾರ್ಯ, 20 ನಿಮಿಷ ಚರ್ಚೆ ನಡೆಸಿದರು. ನಂತರ ಶಿವಕುಮಾರ್‌ ಅವರನ್ನೂ ಭೇಟಿಮಾಡಿ ಮಾತುಕತೆ ನಡೆಸಿದರು.

ಉಭಯ ನಾಯಕರ ಭೇಟಿ ಬಳಿಕ ಸುದ್ದಿಗಾರರ ಜತೆ ಮಾತನಾಡಿದ ಅವರು, ‘ಮುಖ್ಯಮಂತ್ರಿ ಮತ್ತು ಉಪ ಮುಖ್ಯಮಂತ್ರಿಯವರನ್ನು ಭೇಟಿ ಮಾಡಿರುವುದರ ಹಿಂದೆ ರಾಜಕೀಯ ಉದ್ದೇಶ ಇಲ್ಲ. ಬರಪೀಡಿತ ಪ್ರದೇಶಗಳ ಪಟ್ಟಿಯಲ್ಲಿ ಹೊನ್ನಾಳಿ ಕ್ಷೇತ್ರವನ್ನೂ ಸೇರಿಸುವಂತೆ ಒತ್ತಾಯಿಸಿದ್ದೇನೆ’ ಎಂದರು.

‘ಕಾಂಗ್ರೆಸ್‌ ಸೇರುವಂತೆ ಅವರಿಬ್ಬರೂ ನನ್ನನ್ನು ಆಹ್ವಾನಿಸಿಲ್ಲ. ನಾನು ಕೂಡ ಆ ಬಗ್ಗೆ ಯಾವುದೇ ಮಾತನಾಡಿಲ್ಲ. ದಾವಣಗೆರೆ ಲೋಕಸಭಾ ಕ್ಷೇತ್ರದಲ್ಲಿ ನಾನು ಬಿಜೆಪಿ ಟಿಕೆಟ್‌ಗೆ ಪ್ರಬಲ ಆಕಾಂಕ್ಷಿ’ ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT