ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಪ್ರಜಾಪ್ರಭುತ್ವದ ಕೊನೆ ಚುನಾವಣೆಯಂತೆ ಕಾಣುತ್ತಿದೆ: ಮಲ್ಲಿಕಾರ್ಜುನ ಖರ್ಗೆ

Published 17 ಮಾರ್ಚ್ 2024, 16:04 IST
Last Updated 17 ಮಾರ್ಚ್ 2024, 16:04 IST
ಅಕ್ಷರ ಗಾತ್ರ

ಬೆಂಗಳೂರು: ‘ಇದು ಪ್ರಜಾಪ್ರಭುತ್ವದ ಕೊನೆ ಚುನಾವಣೆಯಂತೆ ನನಗೆ ಕಾಣುತ್ತಿದೆ’ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದರು.

ಸುದ್ದಿಗಾರರ ಜೊತೆ ಭಾನುವಾರ ಮಾತನಾಡಿದ ಅವರು, ‘ಪ್ರಜಾಪ್ರಭುತ್ವ ಕೊನೆಗಾಣಿಸಬೇಕು ಎಂದು ಮೋದಿ ಬಯಸುತ್ತಾರೆ. ಇದೇ ಪ್ರಜಾಪ್ರಭುತ್ವದ ಕೊನೆಯ ಚುನಾವಣೆ. ಮಾತು, ವರ್ತನೆಯಿಂದ ಜನರ ನಡುವೆ ಬೇಧ ಮೂಡಿಸಲು ಅವರು ಯತ್ನಿಸುತ್ತಿದ್ದಾರೆ’ ಎಂದರು.

‘ಬಿಜೆಪಿಯವರಿಗೆ ಅನುಕೂಲ ಮಾಡಿಕೊಡಲೆಂದೇ ಚುನಾವಣಾ ಆಯೋಗ ಏಳು ಹಂತದಲ್ಲಿ ಚುನಾವಣೆ ದಿನಾಂಕ ಘೋಷಣೆ ಮಾಡಿದೆ. ಸಾಮಾನ್ಯವಾಗಿ 4– 5 ಹಂತಗಳಲ್ಲಿ ಚುನಾವಣೆ ನಡೆಯುತ್ತಿತ್ತು. ಏಳು ಹಂತದ ಚುನಾವಣೆ ಸರಿ ಎನಿಸುವುದಿಲ್ಲ’ ಎಂದರು. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT