ಶನಿವಾರ, 18 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

JDS –BJP ಹೊಂದಾಣಿಕೆ ಕುರುಡನ ಹೆಗಲ ಮೇಲೆ ಕುಂಟನ ಸವಾರಿಯಂತೆ: ಕಾಂಗ್ರೆಸ್ ವ್ಯಂಗ್ಯ

Published 22 ಜುಲೈ 2023, 6:33 IST
Last Updated 22 ಜುಲೈ 2023, 6:33 IST
ಅಕ್ಷರ ಗಾತ್ರ

ಬೆಂಗಳೂರು: ಲೋಕಸಭೆ ಚುನಾವಣೆಗೆ ಕೆಲವೇ ತಿಂಗಳು ಬಾಕಿ ಇರುವಾಗಲೇ ಆಡಳಿತಾರೂಢ ಕಾಂಗ್ರೆಸ್ ಹಾಗೂ ವಿಪಕ್ಷಗಳಾದ ಬಿಜೆಪಿ, ಜೆಡಿಎಸ್ ಮಧ್ಯೆ ವಾಕ್ಸಮರ ಜೋರಾಗಿದೆ.

ಬಿಜೆಪಿ ಜೊತೆ ಜೆಡಿಎಸ್ ಮೈತ್ರಿ ಮಾಡಿಕೊಳ್ಳುವ ವಿಚಾರವಾಗಿ ಟ್ವೀಟ್ ಮಾಡಿರುವ ಕಾಂಗ್ರೆಸ್, ‘ಕುರುಡನ ಹೆಗಲ ಮೇಲೆ ಕುಂಟನ ಸವಾರಿಯಂತಿದೆ. ಒಬ್ಬರಿಗೆ ನಡೆಯಲಾಗದು, ಮತ್ತೊಬ್ಬರಿಗೆ ಕಣ್ಣು ಕಾಣದು. ಒಟ್ಟಿನಲ್ಲಿ ಈ ಸವಾರಿಯು ದಾರಿ ತಪ್ಪಿ ಪ್ರಪಾತಕ್ಕೆ ಬೀಳುವುದು ನಿಶ್ಚಿತ’ ಎಂದು ಲೇವಡಿ ಮಾಡಿದೆ.

‘ನಾಯಕತ್ವವಿಲ್ಲದ ಬಿಜೆಪಿ, ಜೆಡಿಎಸ್‌ನಿಂದ ನಾಯಕತ್ವದ ಎರವಲು ಪಡೆಯಲು ಮುಂದಾಗಿರುವುದು ನಾಚಿಕೆಗೇಡು. ಇತ್ತ ಜೆಡಿಎಸ್ ಕೋಮುವಾದಿಗಳ ಸಂಘ ಮಾಡಿದ್ದು ಮತಿಗೇಡಿತನ’ ಎಂದು ಕಾಂಗ್ರೆಸ್ ಕಿಡಿಕಾರಿದೆ.

ಬಿಜೆಪಿ ನೇತೃತ್ವದ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟಕ್ಕೆ (ಎನ್‌ಡಿಎ) ಜೆಡಿಎಸ್‌ ಸೇರ್ಪಡೆಯಾಗಲಿದೆ ಎಂಬ ಮಾತುಗಳು ಇತ್ತೀಚೆಗೆ ಕೇಳಿಬರುತ್ತಿವೆ. ಆದರೆ, ಈ ಕುರಿತು ಉಭಯ ಪಕ್ಷಗಳ ನಾಯಕರು ಯಾವುದೇ ಅಧಿಕೃತ ಹೇಳಿಕೆ ನೀಡಿಲ್ಲ.

ಈ ಎಲ್ಲಾ ಬೆಳವಣಿಗೆಗಳ ನಡುವೆ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಮತ್ತು ಜೆಡಿಎಸ್‌ ನಾಯಕರು ಒಟ್ಟಿಗೆ ಪ್ರತಿಭಟನೆ ನಡೆಸುತ್ತಿರುವುದು ರಾಜಕೀಯ ವಲಯದಲ್ಲಿ ಚರ್ಚೆಗೆ ಕಾರಣವಾಗಿದೆ.

ಓದಿ... ಬಿಜೆಪಿ ಜತೆ ವಿಲೀನವೋ ಮಿಲನವೋ: ‘ಎನ್‌ಡಿಎ’ದತ್ತ ಜೆಡಿಎಸ್‌?

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT