ಸಂಸದ ಪ್ರತಾಪ ಸಿಂಹ ಅವರು ಮಾಜಿ ಮುಖ್ಯಮಂತ್ರಿ. ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ.ಕುಮಾರಸ್ವಾಮಿ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಪೋಸ್ಟ್ ಮಾಡಿರುವ ಅವರು, ಕಷ್ಟಕಾಲದಲ್ಲಿ ಸತ್ಯಸಂಗತಿಯನ್ನು ಜನರ ಮುಂದಿಟ್ಟು ಬೆನ್ನಿಗೆ ನಿಂತ ಕುಮಾರಣ್ಣನಿಗೆ ಧನ್ಯವಾದ ತಿಳಿಸಿದೆ ಎಂದು ಬರೆದುಕೊಂಡಿದ್ದಾರೆ.

ಜೆಡಿಎಸ್, ಎನ್ಡಿಎ ಮೈತ್ರಿಕೂಟದ ಭಾಗವಾಗಿದೆ. ಲೋಕಸಭೆ ಚುನಾವಣೆಗೆ ಕೆಲವೇ ತಿಂಗಳು ಬಾಕಿ ಇರುವಾಗಲೇ ಬಿಜೆಪಿ ನಾಯಕರಾದ ವಿ.ಸೋಮಣ್ಣ, ಸಿ.ಟಿ.ರವಿ ಸೇರಿದಂತೆ ಇತರೆ ನಾಯಕರು ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಹಾಗೂ ಎಚ್.ಡಿ.ಕುಮಾರಸ್ವಾಮಿ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.