ಭಾನುವಾರ, 21 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತುಮಕೂರು ಲೋಕಸಭಾ ಕ್ಷೇತ್ರ | ಸೋಮಣ್ಣ ಬದಲು ಯುವಕರಿಗೆ ಟಿಕೆಟ್‌ ನೀಡಿ: ಚಿದಾನಂದ

Published 21 ಫೆಬ್ರುವರಿ 2024, 16:36 IST
Last Updated 21 ಫೆಬ್ರುವರಿ 2024, 16:36 IST
ಅಕ್ಷರ ಗಾತ್ರ

ನವದೆಹಲಿ: ತುಮಕೂರು ಲೋಕಸಭಾ ಕ್ಷೇತ್ರದಲ್ಲಿ ಮಾಜಿ ಸಚಿವ ವಿ.ಸೋಮಣ್ಣ ಅವರಿಗೆ ಬಿಜೆಪಿ ಟಿಕೆಟ್‌ ನೀಡಬಾರದು ಎಂದು ಟಿಕೆಟ್‌ ಆಕಾಂಕ್ಷಿ ಸ್ಫೂರ್ತಿ ಚಿದಾನಂದ ಆಗ್ರಹಿಸಿದರು. 

ಬುಧವಾರ ಇಲ್ಲಿ ಸುದ್ದಿಗಾರರ ಜತೆಗೆ ಮಾತನಾಡಿ, ‘ಸೋಮಣ್ಣ ಅವರು ಕ್ಷೇತ್ರಕ್ಕೆ ಹೊರಗಿನವರು. ಅವರು 40 ವರ್ಷಗಳಿಂದ ಶಾಸಕರಾಗಿ, ವಿಧಾನ ಪರಿಷತ್‌ ಸದಸ್ಯರಾಗಿ ಹಾಗೂ ಸಚಿವರಾಗಿ ಕೆಲಸ ಮಾಡಿದ್ದಾರೆ. ವಿಧಾನಸಭಾ ಚುನಾವಣೆಯಲ್ಲಿ ಎರಡು ಕ್ಷೇತ್ರಗಳಲ್ಲಿ ಸೋತಿದ್ದಾರೆ. ಅವರ ಬದಲು ಯುವಕರಿಗೆ ಅವಕಾಶ ನೀಡಬೇಕು’ ಎಂದು ಒತ್ತಾಯಿಸಿದರು. 

‘ಆರು ವರ್ಷಗಳಿಂದ ಲೋಕಸಭಾ ಚುನಾವಣೆಗೆ ಸಿದ್ಧತೆ ಮಾಡುತ್ತಿದ್ದೇನೆ. ಕ್ಷೇತ್ರದಲ್ಲಿ ಆರೂವರೆ ಲಕ್ಷ ಒಬಿಸಿ ಮತಗಳಿವೆ. ಕ್ಷೇತ್ರದ ಜನರು ಪ್ರಜ್ಞಾವಂತರಿದ್ದಾರೆ. ಹಾಗಾಗಿ, ನನಗೆ ಟಿಕೆಟ್‌ ನೀಡಬೇಕು ಎಂದು ಒತ್ತಾಯಿಸಿ ರಾಜ್ಯ ಚುನಾವಣಾ ಉಸ್ತುವಾರಿ ರಾಧಾಮೋಹನ್‌ ದಾಸ್ ಅಗರವಾಲ್‌, ರಾಜ್ಯ ಉಸ್ತುವಾರಿ ಅರುಣ್‌ ಸಿಂಗ್‌, ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಮತ್ತಿತರ ನಾಯಕರಿಗೆ ಮನವಿ ಸಲ್ಲಿಸಲಾಗಿದೆ. ಸಂಘಟನೆ ಮುಂದುವರಿಸುವಂತೆ ಸೂಚಿಸಿದ್ದಾರೆ’ ಎಂದರು. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT