ಶುಕ್ರವಾರ, 14 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

LS Result 2024 | ರಾಜ್ಯದಲ್ಲಿ ಕಾಂಗ್ರೆಸ್‌ಗೆ ಚೊಂಬು: ಬಿಜೆಪಿ ವ್ಯಂಗ್ಯ

Published 5 ಜೂನ್ 2024, 6:25 IST
Last Updated 5 ಜೂನ್ 2024, 6:25 IST
ಅಕ್ಷರ ಗಾತ್ರ

ಬೆಂಗಳೂರು: ಲೋಕಸಭಾ ಚುನಾವಣೆ ಫಲಿತಾಂಶ ಮಂಗಳವಾರ ( ಜೂನ್‌ 4) ರಂದು ಹೊರಬಿದ್ದಿದೆ. ಕರ್ನಾಟಕದಲ್ಲಿ ಬಿಜೆಪಿ 17 ಸ್ಥಾನಗಳನ್ನು ಗಳಿಸಿದೆ.

ಈ ಸಂಬಂಧ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಚೊಂಬಿನ ಪೋಸ್ಟರ್‌ ಅನ್ನು ಹಂಚಿಕೊಂಡಿದೆ.

ಕೇಂದ್ರದಿಂದ ರಾಜ್ಯಕ್ಕೆ ಬರಬೇಕಿದ್ದ ತೆರಿಗೆ ಹಣದಲ್ಲಿ ಕರ್ನಾಟಕಕ್ಕೆ ಅನ್ಯಾಯವಾಗಿದೆ ಎಂದು ಕಾಂಗ್ರೆಸ್‌ ಚೊಂಬು ಹಿಡಿದು ಪ್ರತಿಭಟನೆ ನಡೆಸಿತ್ತು.

ಇದೀಗ ಬಿಜೆಪಿ ಚೊಂಬು ಇರುವ ಪೋಸ್ಟರ್‌ ಹಂಚಿಕೊಂಡು, 'ಕಾಂಗ್ರೆಸ್ 'ಕೈ'ಗೆ 'ಚೊಂಬು' ಕೊಟ್ಟ ನಾಡಿನ ಸಮಸ್ತ ಜನತೆಗೆ ಧನ್ಯವಾದಗಳು’ ಎಂದು ಪೋಸ್ಟ್‌ನಲ್ಲಿ ಬರೆದುಕೊಂಡಿದೆ.

ಕರ್ನಾಟಕದ ಒಟ್ಟು 28 ಲೋಕಸಭೆ ಚುನಾವಣೆ ನಡೆದಿದ್ದು, ಈ ಪೈಕಿ ಕಾಂಗ್ರೆಸ್‌ 9, ಜೆಡಿಎಸ್‌ 2, ಬಿಜೆಪಿ 17 ಸ್ಥಾನಗಳನ್ನು ಪಡೆದುಕೊಂಡಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT