ವಿಧಾನಸಭೆಯ 3, ಮೇಲ್ಮನೆಯ 1ಕ್ಕೆ ಉಪ ಚುನಾವಣೆ
ವಿಧಾನಸಭೆ ಪ್ರತಿನಿಧಿಸುತ್ತಿರುವ ಎಚ್.ಡಿ. ಕುಮಾರಸ್ವಾಮಿ (ಚನ್ನಪಟ್ಟಣ), ಬಸವರಾಜ ಬೊಮ್ಮಾಯಿ (ಶಿಗ್ಗಾವಿ) ಹಾಗೂ ಈ. ತುಕಾರಾಂ (ಸಂಡೂರು) ಹಾಗೂ ಪರಿಷತ್ತಿಗೆ ಸ್ಥಳೀಯ ಸಂಸ್ಥೆಗಳಿಂದ ಆಯ್ಕೆಯಾದ ಕೋಟ ಶ್ರೀನಿವಾಸ ಪೂಜಾರಿ (ದಕ್ಷಿಣ ಕನ್ನಡ) ಲೋಕಸಭೆ ಚುನಾವಣೆಯಲ್ಲಿ ಗೆದ್ದಿದ್ದಾರೆ. ಇವರು ತಾವು ಹೊಂದಿರುವ ಸದಸ್ಯತ್ವಕ್ಕೆ ರಾಜೀನಾಮೆ ಕೊಟ್ಟರೆ, ಆರು ತಿಂಗಳೊಳಗೆ ಉಪ ಚುನಾವಣೆ ನಡೆಯಬೇಕಿದೆ. ರಾಜ್ಯವು ಮತ್ತೊಮ್ಮೆ ಈ ಚುನಾವಣೆಗೆ ಸಜ್ಜಾಗಬೇಕಿದೆ.