ಕಾರವಾರ: ಉತ್ತರ ಕನ್ನಡ ಲೋಕಸಭಾ ಕ್ಷೇತ್ರದಿಂದ ದಾಖಲೆಯ ಅಂತರದ ಮತಗಳೊಂದಿಗೆ ಬಿಜೆಪಿಯ ಅನಂತಕುಮಾರ ಹೆಗಡೆ ಗೆಲುವು ಸಾಧಿಸಿದ್ದಕ್ಕೆ ಪಕ್ಷದ ಕಾರ್ಯಕರ್ತರು ನಗರದಲ್ಲಿ ಶುಕ್ರವಾರ ಸಂಭ್ರಮಾಚರಣೆ ಮಾಡಿದರು. ಈ ಸಂದರ್ಭದಲ್ಲಿ ಕಾರವಾರ- ಅಂಕೋಲಾ ಕ್ಷೇತ್ರದ ಶಾಸಕಿ ರೂಪಾಲಿ ನಾಯ್ಕ ಕುಣಿದು ಕುಪ್ಪಳಿಸಿದರು.

ಡೋಲಿನ ಶಬ್ದಕ್ಕೆ ಪಕ್ಷದ ಮಹಿಳಾ ಮುಖಂಡರು, ಕಾರ್ಯಕರ್ತರೂ ಕೂಡ ಹೆಜ್ಜೆ ಹಾಕಿದರು. ಗ್ರೀನ್ ಸ್ಟ್ರೀಟ್ ನಲ್ಲಿರುವ ಬಿಜೆಪಿ ಕಚೇರಿಯ ಎದುರು ಹಮ್ಮಿಕೊಂಡಿದ್ದ ಈ ಸಂಭ್ರಮಾಚರಣೆಯ ವೇಳೆ ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಿಸಲಾಯಿತು.

'ಮೋದಿಯವರ ಅಭಿವೃದ್ಧಿ ಕಾರ್ಯಗಳಿಂದಾಗಿ ಅನಂತಕುಮಾರ ಹೆಗಡೆಯವರು ನಿರೀಕ್ಷೆ ಮೀರಿ ಗೆಲುವು ಸಾಧಿಸಿದ್ದಾರೆ. ಬಿಜೆಪಿಯೆಂದರೆ ತತ್ವ, ಸಿದ್ಧಾಂತಗಳನ್ನು ಪಾಲಿಸಿಕೊಂಡು ಬಂದಿದೆ. ಇದಕ್ಕಾಗಿ ಜನರು ಬಿಜೆಪಿಯ ಮೇಲೆ ವಿಶ್ವಾಸ ಇಟ್ಟಿದ್ದಾರೆ' ಎಂದು ಈ ವೇಳೆ ಶಾಸಕಿ ರೂಪಾಲಿ ನಾಯ್ಕ ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.