‘ಮಾಜಿ ಪ್ರಧಾನಿ ಇಂದಿರಾಗಾಂಧಿಯವರು ದೇಶದಲ್ಲಿ ತುರ್ತು ಪರಿಸ್ಥಿತಿ ಹೇರಿದ್ದರು. ಹಾಗಾಗಿ, ಅವರ ಮೊಮ್ಮಗ ರಾಹುಲ್ ಗಾಂಧಿಗೆ ಪ್ರಜಾಪ್ರಭುತ್ವದ ಬಗ್ಗೆ ಮಾತನಾಡುವ ಹಕ್ಕು ಇಲ್ಲ’ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಸೋಮವಾರ ಜೋಧಪುರದಲ್ಲಿ ಹೇಳಿದರು. ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರನ್ನು ಜಾರಿ ನಿರ್ದೇಶನಾಲಯ ಬಂಧಿಸಿರುವುದನ್ನು ಖಂಡಿಸಿ ಇಂಡಿಯಾ ಒಕ್ಕೂಟದ ಪಕ್ಷಗಳು ಪ್ರತಿಭಟಿಸಿದ್ದನ್ನು ಖಂಡಿಸಿ ಮಾತನಾಡಿದ ಅವರು, ‘ಭ್ರಷ್ಟಾಚಾರದಲ್ಲಿ ಭಾಗಿಯಾಗಿದ್ದವರು ಜೈಲಿಗೆ ಹೋಗಲಿದ್ದಾರೆ’ ಎಂದರು.