ಬೆಂಗಳೂರು: ‘ಚುನಾವಣಾ ಪ್ರಚಾರದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಭಾವಚಿತ್ರವನ್ನು ಬಳಸುವ ಅಧಿಕಾರ ಕೆ.ಎಸ್. ಈಶ್ವರಪ್ಪ ಅವರಿಗೆ ಇಲ್ಲ’ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್. ಅಶೋಕ ಹೇಳಿದರು.

ಮೋದಿ ಭಾವಚಿತ್ರ ಬಳಕೆಗೆ ಕಾನೂನು ತೊಡಕು ಉಂಟಾಗದಂತೆ ತಡೆಯಲು ಈಶ್ವರಪ್ಪ ನ್ಯಾಯಾಲಯದಲ್ಲಿ ಕೇವಿಯಟ್ ಅರ್ಜಿ ಸಲ್ಲಿಸಿರುವ ಕುರಿತು ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಪ್ರತಿಕ್ರಿಯಿಸಿದ ಅವರು, ‘ಚುನಾವಣಾ ಪ್ರಚಾರದಲ್ಲಿ ಮೋದಿಯವರ ಭಾವಚಿತ್ರ ಬಳಸುವ ಅಧಿಕಾರ ಇರುವುದು ಬಿಜೆಪಿಗೆ ಮಾತ್ರ’ ಎಂದರು.

‘ಅವರ ಮನೆಯಲ್ಲಿ ಮದುವೆ ಅಥವಾ ಇತರ ಕಾರ್ಯಕ್ರಮ ಇದ್ದರೆ ಮೋದಿಯವರ ಭಾವಚಿತ್ರ ಬಳಸಬಹುದು. ಆದರೆ, ರಾಜಕೀಯ ಉದ್ದೇಶಕ್ಕೆ ಬಳಸಲು ಅವಕಾಶವಿಲ್ಲ. ಆ ರೀತಿ ಮಾಡಿದರೆ ನಮ್ಮ ಕಾನೂನು ಘಟಕದ ಸದಸ್ಯರು ಸೂಕ್ತ ಕ್ರಮ ಕೈಗೊಳ್ಳುತ್ತಾರೆ’ ಎಂದು ಹೇಳಿದರು.

‘ಈಶ್ವರಪ್ಪ ಅವರು ನಾಮಪತ್ರ ಸಲ್ಲಿಸಿದರೆ, ಆ ಬಳಿಕ ಮುಂದಿನ ಕ್ರಮದ ಬಗ್ಗೆ ಪಕ್ಷ ನಿರ್ಧರಿಸುತ್ತದೆ’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.