ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹೊಸ ಮುಖಕ್ಕೆ ಮಣೆ; ಬಿಜೆಪಿಯಲ್ಲಿ ಸಾಮಾನ್ಯ: ಅಶ್ವತ್ಥನಾರಾಯಣ

Published 9 ಮಾರ್ಚ್ 2024, 15:29 IST
Last Updated 9 ಮಾರ್ಚ್ 2024, 15:29 IST
ಅಕ್ಷರ ಗಾತ್ರ

ಮೈಸೂರು: ‘ಹೊಸ ಮುಖಗಳಿಗೆ ಮಣೆ ಹಾಕುವುದು ಬಿಜೆಪಿಯಲ್ಲಿ ಸಾಮಾನ್ಯ’ ಎಂದು ಶಾಸಕ ಡಾ.ಸಿ.ಎನ್. ಅಶ್ವತ್ಥನಾರಾಯಣ ಹೇಳಿದರು.

ಇಲ್ಲಿ ಮಾಧ್ಯಮ ಪ್ರತಿನಿಧಿಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ‘ಹೊಸ ಚಿಗುರು, ಹಳೆ ಬೇರು ಎಂಬುದು ನಡೆಯುತ್ತಲೇ ಇರುತ್ತದೆ. ರಾಜಕೀಯದಲ್ಲಿ ಇದೇ ನಿಶ್ಚಿತ ಎಂದು ಹೇಳಲು ಸಾಧ್ಯವಿಲ್ಲ’ ಎಂದರು.

‘ರಾಜಕಾರಣ ತುಂಬಾ ಡೈನಮಿಕ್ ಆಗಿರುತ್ತದೆ. ರಾಜಕೀಯದಲ್ಲಿ ಏನೂ ನಿಶ್ಚಿತವಾಗಿ ಇರುವುದಿಲ್ಲ. ಪಕ್ಷದ ಸಂಸದೀಯ ಮಂಡಳಿಯು ಏನಾದರೂ ನಿರ್ಧಾರ ಕೈಗೊಳ್ಳಬಹುದು. ಅಲ್ಲಿಯವರೆಗೂ ಎಲ್ಲರೂ ಕಾಯಬೇಕಾಗುತ್ತದೆ. ಹಾಲಿ ಸಂಸದರಲ್ಲಿ ಕೆಲವರಿಗೆ ಟಿಕೆಟ್ ತಪ್ಪಲಿದೆ ಎಂಬ ವಿಷಯದ ಕುರಿತು ಪ್ರತಿಕ್ರಿಯಿಸಲು ಬಯಸುವುದಿಲ್ಲ’ ಎಂದರು.

ಹೃದ್ರೋಗ ತಜ್ಞ ಡಾ.ಸಿ.ಎನ್.ಮಂಜುನಾಥ್ ರಾಜಕೀಯ ಪ್ರವೇಶದ ಬಗ್ಗೆ ಪ್ರತಿಕ್ರಿಯಿಸಿದ ಅವರು, ‘ಬೆಂಗಳೂರು ಗ್ರಾಮಾಂತರ ಕ್ಷೇತ್ರದಿಂದ ಸ್ಪರ್ಧಿಸುವಂತೆ ಅವರಿಗೆ ಆಹ್ವಾನ ನೀಡಿದ್ದೇವೆ‌. ದೊಡ್ಡವರ ಮಟ್ಟದಲ್ಲಿ ಏನು ನಿರ್ಧರಿಸುತ್ತಾರೆಯೋ ಗೊತ್ತಿಲ್ಲ. ರಾಜಕೀಯದಲ್ಲಿ ಯಾರಿಗೂ ಬಾಗಿಲು ಮುಚ್ಚುವುದಿಲ್ಲ’ ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT