ಬೆಂಗಳೂರು: ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಸಹಕಾರ ಸಂಘ ಹಾಗೂ ಸಹಕಾರ ಬ್ಯಾಂಕುಗಳ ಆಡಳಿತ ಮಂಡಳಿ ಚುನಾವಣೆಯನ್ನು ಮುಂದಿನ ಆದೇಶದವರೆಗೆ ಮುಂದೂಡಲಾಗಿದೆ. ಅಲ್ಲದೆ, ಹಾಲಿ ಆಡಳಿತ ಮಂಡಳಿ ಮತ್ತು ಪದಾಧಿಕಾರಿಗಳ ಅವಧಿಯನ್ನು ವಿಸ್ತರಿಸಿ ಸಹಕಾರ ಇಲಾಖೆ ಆದೇಶ ಹೊರಡಿಸಿದೆ.

ಮಾರ್ಚ್ ಮತ್ತು ಜೂನ್ ತಿಂಗಳ ಮಧ್ಯದ ಅವಧಿಯಲ್ಲಿ ಹಲವು ಸಹಕಾರ ಸಂಘಗಳು ಮತ್ತು ಸಹಕಾರ ಬ್ಯಾಂಕುಗಳ ಆಡಳಿತ ಮಂಡಳಿಗಳ ಅವಧಿ ಮುಕ್ತಾಯಗೊಳ್ಳುತ್ತಿದೆ. ಇಂತಹ ಕೆಲವು ಸಂಘಗಳು ಮತ್ತು ಬ್ಯಾಂಕುಗಳ ಆಡಳಿತ ಮಂಡಳಿಗೆ ಈಗಾಗಲೇ ಚುನಾವಣೆಗೆ ಘೋಷಿಸಲಾಗಿದೆ. ಆದರೆ, ಶೀಘ್ರದಲ್ಲಿ ಲೋಕಸಭೆ ಚುನಾವಣೆ ಘೋಷಣೆಯಾಗಿ ನೀತಿ ಸಂಹಿತೆ ಜಾರಿಗೆ ಬರಲಿದೆ. ಈ ವೇಳೆ ಹೆಚ್ಚಿನ ಅಧಿಕಾರಿ ಸಿಬ್ಬಂದಿ ಚುನಾವಣಾ ಕರ್ತವ್ಯಕ್ಕೆ ಅಗತ್ಯ ಇರುವುದರಿಂದ ಆಡಳಿತ ಮಂಡಳಿ ಚುನಾವಣೆ ಮುಂದೂಡಲು ನಿರ್ಧರಿಸಲಾಗಿದೆ ಎಂದು ಆದೇಶದಲ್ಲಿ ವಿವರಿಸಲಾಗಿದೆ.

ಸಹಕಾರ ಸಂಘಗಳ ಕಾಯ್ದೆಯ ಅನ್ವಯ ಅಧಿಕಾರ ಅವಧಿ ಮುಕ್ತಾಯಗೊಂಡ ಸಹಕಾರ ಸಂಘ ಮತ್ತು ಬ್ಯಾಂಕುಗಳಿಗೆ ಆಡಳಿತ ಅಧಿಕಾರಿಯನ್ನು ನೇಮಿಸಬೇಕಾಗಿದೆ. ಆದರೆ, ಸಹಕಾರ ಇಲಾಖೆಯೂ ಸೇರಿದಂತೆ ಇತರ ಇಲಾಖೆಗಳ ಅಧಿಕಾರಿಗಳಿಗೂ ಲೋಕಸಭೆ ಚುನಾವಣೆಯಲ್ಲಿ ಕರ್ತವ್ಯ ನಿಭಾಯಿಸಬೇಕಾಗಿದೆ. ಹೀಗಾಗಿ ಆಡಳಿತ ಅಧಿಕಾರಿಗಳ ನೇಮಕ ಕಷ್ಟಸಾಧ್ಯ. ಈ ಕಾರಣಕ್ಕೆ ಹಾಲಿ ಆಡಳಿತ ಮಂಡಳಿಗಳ ಅವಧಿಯನ್ನು ವಿಸ್ತರಿಸಲಾಗುವುದು ಎಂದೂ ಆದೇಶದಲ್ಲಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.