ಬೆಂಗಳೂರು: ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಬಿಜೆಪಿ ಸಂಸದ ಸದಾನಂದ ಗೌಡ, ತಮ್ಮ ಕ್ಷೇತ್ರದ ಮತದಾರರಿಗೆ ಧನ್ಯವಾದ ಅರ್ಪಿಸಿ ಫೇಸ್ಬುಕ್ ಪೋಸ್ಟ್ ಮಾಡಿದ್ದಾರೆ.

ಅ ಮೂಲಕ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಟಿಕೆಟ್ ವಂಚಿತರಾಗಿವ ಸುಳಿವು ನೀಡಿದ್ದಾರೆ. ಕಳೆದ 10 ವರ್ಷಗಳಿಂದ ಈ ಕ್ಷೇತ್ರವನ್ನು ಅವರು ಪ್ರತಿನಿಧಿಸುತ್ತಿದ್ದಾರೆ.
.ಲೋಕಸಭೆ ಚುನಾವಣೆ | ನಾನು ಈಗಲೂ ಟಿಕೆಟ್ ಆಕಾಂಕ್ಷಿ: ಸದಾನಂದ ಗೌಡ.
ಅವರ ಫೇಸ್ಬುಕ್ ಪೋಸ್ಟ್ ಹೀಗಿದೆ;

’ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ನನ್ನೆಲ್ಲಾ ಪ್ರೀತಿಯ ಬಂಧುಗಳೇ, ನನಗೆ ಕಳೆದ ಹತ್ತು ವರ್ಷಗಳ ಕಾಲ ಈ ಕ್ಷೇತ್ರದ ಲೋಕಸಭಾ ಸದಸ್ಯನಾಗಿ, ನಿಮ್ಮ ಕೆಲಸ ಮಾಡುವ ಅವಕಾಶವನ್ನು ಮಾಡಿಕೊಟ್ಟು ಆಶೀರ್ವಾದವನ್ನು ಮಾಡಿದ್ದೀರಿ. ನಾನು ನನ್ನ ಶಕ್ತಿಮೀರಿ ನಿಮ್ಮ ಸೇವೆಯನ್ನು ಮಾಡುವ ಪ್ರಯತ್ನವನ್ನು ಮಾಡಿದ್ದೇನೆ.

ನಿಮ್ಮ ಆಶೀರ್ವಾದದಿಂದ ಕೇಂದ್ರದಲ್ಲಿ ನಮ್ಮೆಲ್ಲರ ಪ್ರೀತಿಯ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಜೊತೆಯಲ್ಲಿ 7 ವರ್ಷಗಳ ಕಾಲ ಕ್ಯಾಬಿನೆಟ್ ಮಂತ್ರಿಯಾಗಿ ಕೆಲಸ ಮಾಡುವ ಅವಕಾಶವನ್ನು ಕೂಡ ಕಲ್ಪಿಸಿದ್ದೀರಿ. ನಾನು ನಿಮ್ಮೆಲ್ಲರಿಗೂ ಚಿರಋಣಿ. ನಿಮ್ಮ ಜೊತೆಗೆ ಇನ್ನು ಮುಂದೆಯೂ ಇರುತ್ತೇನೆ. ಎಲ್ಲರಿಗೂ ನನ್ನ ಅಂತರಾಳದ ಹೃದಯ ತುಂಬಿದ ಧನ್ಯವಾದಗಳು’.
.ಹಿರಿಯ ನಾಯಕರು ದೂರವಾದರೆ ಪಕ್ಷದ ಮೇಲೆ ಪರಿಣಾಮ: ಸದಾನಂದಗೌಡ.
ಸದಾನಂದ ಗೌಡ ಅವರಿಗೆ ಟಿಕೆಟ್ ಕೈತಪ್ಪುವ ಸಂಭವ ಇದೆ ಎನ್ನುವ ಚರ್ಚೆಗಳು ನಡೆಯುತ್ತಿರುವಾಗಲೇ ಅವರು ಈ ಪೋಸ್ಟ್ ಮಾಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.