ಸೋಮವಾರ, 22 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಲೋಕಸಭೆ ಚುನಾವಣೆ: ಕರ್ನಾಟಕದ ಅಭ್ಯರ್ಥಿಗಳ ಅಖೈರಿಗೆ ಕೈ ಕಮಲ ಕಸರತ್ತು

Published 7 ಮಾರ್ಚ್ 2024, 23:30 IST
Last Updated 7 ಮಾರ್ಚ್ 2024, 23:30 IST
ಅಕ್ಷರ ಗಾತ್ರ

ನವದೆಹಲಿ: ಕರ್ನಾಟಕದ 28 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಅಖೈರುಗೊಳಿಸಲು ಕಾಂಗ್ರೆಸ್‌ ಹಾಗೂ ಬಿಜೆಪಿಯ ಉನ್ನತ ನಾಯಕರು ರಾಷ್ಟ್ರ ರಾಜಧಾನಿಯಲ್ಲಿ ಗುರುವಾರ ಕಸರತ್ತು ನಡೆಸಿದರು.

ಬಿಜೆಪಿ ಅಧ್ಯಕ್ಷ ಜೆ.ಪಿ.ನಡ್ಡಾ ಹಾಗೂ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರು ಬಿಜೆಪಿಯ ರಾಜ್ಯ ನಾಯಕರೊಂದಿಗೆ ಬುಧವಾರ ರಾತ್ರಿ ಸುಮಾರು 4 ಗಂಟೆಗಳ ಕಾಲ ಸುದೀರ್ಘ ಸಮಾಲೋಚನೆ ನಡೆಸಿ ಆಕಾಂಕ್ಷಿಗಳ, ಕ್ಷೇತ್ರಗಳ ಜಾತಿವಾರು ಲೆಕ್ಕಾಚಾರ ಮತ್ತಿತರ ವಿಷಯಗಳ ಮಾಹಿತಿ ಪಡೆದರು. ವರಿಷ್ಠರು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಅವರೊಂದಿಗೆ ಪ್ರತ್ಯೇಕವಾಗಿ ಚರ್ಚಿಸಿದರು. ರಾಜ್ಯ ನಾಯಕರ ಜತೆಗಿನ ಸಭೆಯಲ್ಲಿ ಹಾಲಿ ಸಂಸದರ ಬಗ್ಗೆ ಕೇಂದ್ರ ನಾಯಕರು ಮಾಹಿತಿ ಪಡೆದರು. ಪ್ರತಿ ಕ್ಷೇತ್ರದಲ್ಲಿನ ಧನಾತ್ಮಕ ಮತ್ತು ಋಣಾತ್ಮಕ ವಿಷಯಗಳ ಬಗ್ಗೆ ಚರ್ಚಿಸಿದರು ಎಂದು ಮೂಲಗಳು ತಿಳಿಸಿವೆ.

ಕರಾವಳಿ ಕರ್ನಾಟಕದ ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ಉಡುಪಿ–ಚಿಕ್ಕಮಗಳೂರು ಕ್ಷೇತ್ರಗಳಿಗೆ ಅಭ್ಯರ್ಥಿಗಳ ಆಯ್ಕೆ ಸಂಬಂಧ ಸಂಘ ಪರಿವಾರದ ನಾಯಕರ ಅಭಿಪ್ರಾಯವನ್ನು ವರಿಷ್ಠರು ಕೇಳಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಕಾಂಗ್ರೆಸ್‌ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನೇತೃತ್ವದಲ್ಲಿ ಕಾಂಗ್ರೆಸ್‌ನ ಕೇಂದ್ರ ಚುನಾವಣಾ ಸಮಿತಿ ಸಭೆಯಲ್ಲಿ ಕರ್ನಾಟಕ ಸೇರಿದಂತೆ 10 ರಾಜ್ಯಗಳ ಅಭ್ಯರ್ಥಿಗಳ ಕುರಿತು ಚರ್ಚಿಸಲಾಯಿತು. ಈ ಸಭೆಯಲ್ಲಿ ಕಾಂಗ್ರೆಸ್‌ ಅಧಿನಾಯಕಿ ಸೋನಿಯಾ ಗಾಂಧಿ, ರಾಜ್ಯ ಉಸ್ತುವಾರಿ ರಣದೀಪ್‌ ಸಿಂಗ್ ಸುರ್ಜೆವಾಲಾ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಮತ್ತಿತರ ನಾಯಕರು ಭಾಗಿಯಾದರು. ಮುಂದಿನ ಸಭೆ ಇದೇ 11ರಂದು ನಡೆಯಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT