ಮಂಗಳವಾರ, 7 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಒಂಬತ್ತು ತಾಲ್ಲೂಕು ಕಚೇರಿಗಳಲ್ಲಿ ಲೋಕಾಯುಕ್ತ ಅಧಿಕಾರಿಗಳಿಂದ ಶೋಧ

Published 20 ಜನವರಿ 2024, 10:21 IST
Last Updated 20 ಜನವರಿ 2024, 10:21 IST
ಅಕ್ಷರ ಗಾತ್ರ

ಬೆಂಗಳೂರು: ಭ್ರಷ್ಟಾಚಾರ, ದುರಾಡಳಿತ ಮತ್ತು ಅವ್ಯವಹಾರಗಳ ಆರೋಪಗಳಿಗೆ ಸಂಬಂಧಿಸಿದ ದೂರುಗಳನ್ನು ಆಧರಿಸಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಐದು ಮತ್ತು ಬೆಂಗಳೂರು ನಗರ ಜಿಲ್ಲೆಯ ನಾಲ್ಕು ತಾಲ್ಲೂಕು ಕಚೇರಿಗಳ ಮೇಲೆ ಶನಿವಾರ ಏಕಕಾಲಕ್ಕೆ ದಾಳಿ ಮಾಡಿರುವ ಲೋಕಾಯುಕ್ತದ ಪೊಲೀಸ್ ಮತ್ತು ನ್ಯಾಯಾಂಗ ವಿಭಾಗದ ಅಧಿಕಾರಿಗಳು ಶೋಧ ನಡೆಸುತ್ತಿದ್ದಾರೆ.

ಎರಡೂ ಜಿಲ್ಲೆಗಳ ತಾಲ್ಲೂಕು ಕಚೇರಿಗಳ ಅಧಿಕಾರಿಗಳ ವಿರುದ್ಧ ಲೋಕಾಯುಕ್ತದಲ್ಲಿ 599 ಪ್ರಕರಣಗಳು ವಿಚಾರಣಾ ಹಂತದಲ್ಲಿವೆ. ಈ ಕಚೇರಿಗಳಲ್ಲಿ ಅವ್ಯವಹಾರ, ಭ್ರಷ್ಟಾಚಾರ ನಡೆಯುತ್ತಿರುವ ಕುರಿತು ಲೋಕಾಯುಕ್ತದ ಪೊಲೀಸರು ಗೋಪ್ಯ ತಪಾಸಣೆ ನಡೆಸಿ‌ ಮಾಹಿತಿ ಸಂಗ್ರಹಿಸಿದ್ದರು. ಪೊಲೀಸರ ವರದಿಯನ್ನು ಆಧರಿಸಿ ಈ ಕಚೇರಿಗಳ ಮೇಲೆ ದಿಢೀರ್ ದಾಳಿಮಾಡಿ ಶೋಧ ನಡೆಸುವಂತೆ‌ ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್. ಪಾಟೀಲ‌ ಆದೇಶಿಸಿದ್ದರು.

ಶನಿವಾರ ಮಧ್ಯಾಹ್ನ 12 ಗಂಟೆ ವೇಳೆ ಒಂಬತ್ತು ತಾಲ್ಲೂಕು ಕಚೇರಿಗಳ ಮೇಲೆ‌ ದಾಳಿಮಾಡಿರುವ ಲೋಕಾಯುಕ್ತದ ಪೊಲೀಸ್ ಮತ್ತು ನ್ಯಾಯಾಂಗ ವಿಭಾಗಗಳ ಒಂಬತ್ತು ತಂಡಗಳು ದಾಳಿಮಾಡಿವೆ. ಕಚೇರಿಗಳಲ್ಲಿ ಶೋಧ ಮುಂದುವರಿದಿದೆ.

ಲೋಕಾಯುಕ್ತ ಬಿ.ಎಸ್. ಪಾಟೀಲ ಅವರು ಕಂದಾಯ ಭವನದಲ್ಲಿರುವ ಬೆಂಗಳೂರು ಉತ್ತರ ಮತ್ತು ದಕ್ಷಿಣ ತಾಲ್ಲೂಕು ಕಚೇರಿಗಳಲ್ಲಿ ಕಾರ್ಯಾಚರಣೆ ಪರಿಶೀಲಿಸುತ್ತಿದ್ದಾರೆ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT