ಭಾನುವಾರ, 5 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆದಾಯಕ್ಕಿಂತ ಹೆಚ್ಚು ಆಸ್ತಿ: ತಹಶೀಲ್ದಾರ್ ಅಜಿತ್ ರೈ 7 ದಿನ ಲೋಕಾಯುಕ್ತ ಪೊಲೀಸ್ ವಶಕ್ಕೆ

Published 30 ಜೂನ್ 2023, 8:08 IST
Last Updated 30 ಜೂನ್ 2023, 8:08 IST
ಅಕ್ಷರ ಗಾತ್ರ

ಬೆಂಗಳೂರು: ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿರುವ ಆರೋಪ ಎದುರಿಸುತ್ತಿರುವ ಕೆ.ಆರ್. ಪುರದ ಹಿಂದಿನ ತಹಶೀಲ್ದಾರ್ ಅಜಿತ್ ಕುಮಾರ್ ರೈ ಅವರನ್ನು ಹೆಚ್ಚಿನ ವಿಚಾರಣೆಗಾಗಿ ಏಳು ದಿನಗಳ ಕಾಲ ಲೋಕಾಯುಕ್ತ ಪೊಲೀಸರ ವಶಕ್ಕೆ ನೀಡಿ ನ್ಯಾಯಾಲಯ ಆದೇಶ ಹೊರಡಿಸಿದೆ.

ಅಜಿತ್ ರೈ ಅವರ ಮನೆ ಹಾಗೂ ಇತರ ಹತ್ತು ಸ್ಥಳಗಳ ಮೇಲೆ ಬುಧವಾರ ಬೆಳಿಗ್ಗೆ ದಾಳಿಮಾಡಿದ್ದ ಲೋಕಾಯುಕ್ತ ಪೊಲೀಸರು ಶೋಧ ನಡೆಸಿದ್ದರು. ಗುರುವಾರ ತಡ ರಾತ್ರಿಯವರೆಗೂ ಶೋಧ ನಡೆಸಲಾಗಿದೆ. ₹ 500 ಕೋಟಿಗೂ ಹೆಚ್ಚು ಮೌಲ್ಯದ ಬೇನಾಮಿ ಆಸ್ತಿಗಳನ್ನು ಆರೋಪಿಯು ಹೊಂದಿರುವುದು ತನಿಖೆಯಲ್ಲಿ ಪತ್ತೆಯಾಗಿದೆ. ಈ ಕಾರಣದಿಂದ ಅಜಿತ್ ಅವರನ್ನು ತನಿಖಾ ತಂಡವು ಗುರುವಾರ ಬಂಧಿಸಿತ್ತು.

ಸಿಟಿ ಸಿವಿಲ್ ನ್ಯಾಯಾಲಯ ಶುಕ್ರವಾರ ಮಧ್ಯಾಹ್ನ ಆರೋಪಿಯನ್ನು ಹಾಜರುಪಡಿಸಲಾಯಿತು. ಹೆಚ್ಚಿನ ವಿಚಾರಣೆಗಾಗಿ ಏಳು ದಿನಗಳ ಕಾಲ ತಮ್ಮ ವಶಕ್ಕೆ ನೀಡುವಂತೆ ಲೋಕಾಯುಕ್ತ ಪೊಲೀಸರು ಮನವಿ ಸಲ್ಲಿಸಿದರು. ಅದನ್ನು ಮಾನ್ಯ ಮಾಡಿ ನ್ಯಾಯಾಧೀಶರು ಆದೇಶ ಹೊರಡಿಸಿದರು

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT