ಬೆಂಗಳೂರು: ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ವಲಯ ಅರಣ್ಯಾಧಿಕಾರಿ ದಾಳೇಶ್ ಎ.ಎಲ್. ಅವರ ಮನೆಯ ಮೇಲೆ ಶನಿವಾರ ದಾಳಿ ನಡೆಸಿದ ಲೋಕಾಯುಕ್ತ ಅಧಿಕಾರಿಗಳು ₹3.08 ಕೋಟಿ ಮೌಲ್ಯದ ಅಕ್ರಮ ಆಸ್ತಿ ಪತ್ತೆ ಮಾಡಿದ್ದಾರೆ.

ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿದ ಸಂಬಂಧ ಬಂದಿದ್ದ ದೂರಿನ ಆಧಾರದಲ್ಲಿ ಬೆಂಗಳೂರು ನಗರ–1 ವಿಭಾಗದ ಲೋಕಾಯುಕ್ತ ಪೊಲೀಸ್ ಠಾಣೆಯಲ್ಲಿ ದಾಳೇಶ್ ಅವರ ವಿರುದ್ಧ ಪ್ರಕರಣ ದಾಖಲಾಗಿತ್ತು. ಅದರಂತೆ ಲೋಕಾಯುಕ್ತ ಪೊಲೀಸರು ಮತ್ತು ಅಧಿಕಾರಿಗಳು, ದಾಳೇಶ್ ಮತ್ತು ಅವರ ಆಪ್ತರಿಗೆ ಸೇರಿದ ನಾಲ್ಕು ಸ್ಥಳಗಳಲ್ಲಿ ದಾಳಿ ನಡೆಸಿದ್ದರು.

ದಾಳೇಶ್ ಮತ್ತು ಅವರ ಆಪ್ತರ ಹೆಸರಿನಲ್ಲಿ ₹2.70 ಕೋಟಿ ಮೌಲ್ಯದ 3 ನಿವೇಶನ, 2 ವಾಸದ ಮನೆ, 1 ವಾಣಿಜ್ಯ ಸಂಕೀರ್ಣ ಮತ್ತು 17 ಎಕರೆ 20 ಗುಂಟೆ ಕೃಷಿ ಜಮೀನು ಇರುವುದು ಪತ್ತೆಯಾಗಿದೆ. ₹13 ಲಕ್ಷ ಮೌಲ್ಯದ ಚಿನ್ನಾಭರಣ, ₹34.50 ಲಕ್ಷ ಮೌಲ್ಯದ ವಾಹನಗಳು ಪತ್ತೆಯಾಗಿವೆ. ಶೋಧ ಕಾರ್ಯ ಮುಂದುವರೆದಿದೆ ಎಂದು ಲೋಕಾಯುಕ್ತದ ಪ್ರಕಟಣೆ ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.