ಬೆಂಗಳೂರು: ಆದಾಯಕ್ಕಿಂತ ಹೆಚ್ಚು ಆಸ್ತಿ ಗಳಿಸಿದ ಪ್ರಕರಣದಲ್ಲಿ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ (ಬಿಡಿಎ) ಸರ್ವೆ ಮೇಲ್ವಿಚಾರಕ ಡಿ.ವೆಂಕಟೇಶ್ ಅವರ ಮನೆಯ ಮೇಲೆ ದಾಳಿ ನಡೆಸಿದ್ದ ಲೋಕಾಯುಕ್ತ ಪೊಲೀಸರು, ₹1.53 ಕೋಟಿ ಮೊತ್ತದ ಆಸ್ತಿಗಳನ್ನು ಪತ್ತೆ ಮಾಡಿದ್ದಾರೆ.

ವೆಂಕಟೇಶ್ ಅವರ ವಿರುದ್ಧ ಬಾಗಲಕೋಟೆಯ ಲೋಕಾಯುಕ್ತ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಬೆಂಗಳೂರಿನಲ್ಲಿ ವೆಂಕಟೇಶ್ ಅವರಿಗೆ ಸೇರಿದ ಐದು ಸ್ಥಳಗಳಲ್ಲಿ ಬುಧವಾರ ಬೆಳಿಗ್ಗೆ ದಾಳಿ ನಡೆಸಿದ್ದ ಲೋಕಾಯುಕ್ತ ಪೊಲೀಸರು, ತಡರಾತ್ರಿಯವರೆಗೆ ಶೋಧ ನಡೆಸಿದ್ದರು.

ಈ ವೇಳೆ ವೆಂಕಟೇಶ್ ಅವರಿಗೆ ಸೇರಿದ ₹90.77 ಲಕ್ಷ ಮೌಲ್ಯದ 7 ನಿವೇಶನಗಳು, 6 ಎಕರೆ 20 ಗುಂಟೆ ಕೃಷಿ ಜಮೀನು ಮತ್ತು ಒಂದು ಮನೆ ಪತ್ತೆಯಾಗಿದೆ. ₹29 ಲಕ್ಷ ಮೌಲ್ಯದ ಚಿನ್ನಾಭರಣಗಳು, ₹32 ಲಕ್ಷ ಮೌಲ್ಯದ ವಾಹನಗಳು ಪತ್ತೆಯಾಗಿವೆ ಎಂದು ಲೋಕಾಯುಕ್ತದ ಪ್ರಕಟಣೆ ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.