ಶುಕ್ರವಾರ, 17 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Video | ಸಂಸದ ಪ್ರಜ್ವಲ್‌ ರೇವಣ್ಣ ವಿರುದ್ಧ ಲುಕ್ಔಟ್ ನೋಟಿಸ್

Published 2 ಮೇ 2024, 8:12 IST
Last Updated 2 ಮೇ 2024, 8:12 IST
ಅಕ್ಷರ ಗಾತ್ರ

ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯಾಗಿರುವ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಎಸ್‌ಐಟಿ ಅಧಿಕಾರಿಗಳು ಲುಕ್‌ಔಟ್ ನೋಟಿಸ್ ಹೊರಡಿಸಿದ್ದಾರೆ. ಹೊಳೆನರಸೀಪುರ ಟೌನ್ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣದಲ್ಲಿ ಜೆಡಿಎಸ್ ಶಾಸಕ ಎಚ್.ಡಿ.ರೇವಣ್ಣ ಹಾಗೂ ಅವರ ಮಗ ಪ್ರಜ್ವಲ್ ಆರೋಪಿಗಳಾಗಿದ್ದಾರೆ. ಪ್ರಕರಣ ದಾಖಲಾಗುವ ಮುನ್ನವೇ ಪ್ರಜ್ವಲ್ ದೇಶದಿಂದ ಪರಾರಿಯಾಗಿದ್ದಾರೆ. ವಿಚಾರಣೆಗೆ ನೋಟಿಸ್ ನೀಡಿದರೂ ಹಾಜರಾಗಿಲ್ಲ. ಪ್ರಜ್ವಲ್ ವಿದೇಶದಲ್ಲಿರುವ ಬಗ್ಗೆ ಎಸ್‌ಐಟಿ ಅಧಿಕಾರಿಗಳು ಮಾಹಿತಿ ಕಲೆ ಹಾಕಿದ್ದಾರೆ. ಪ್ರಜ್ವಲ್ ಪತ್ತೆಗಾಗಿ ಲುಕ್ ಔಟ್ ನೋಟಿಸ್ ಜಾರಿ ಮಾಡಿ, ವಿಮಾನ ನಿಲ್ದಾಣ ಅಧಿಕಾರಿಗಳು ಹಾಗೂ ಅಂತರರಾಷ್ಟ್ರೀಯ ತನಿಖಾ ಸಂಸ್ಥೆಗಳಿಗೆ ರವಾನಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT