ಸೋಮವಾರ, 6 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

20ರಿಂದ ಸರಕು ಸಾಗಣೆ ವಾಹನ ಮುಷ್ಕರ

Last Updated 17 ಜುಲೈ 2018, 17:26 IST
ಅಕ್ಷರ ಗಾತ್ರ

ಬೆಂಗಳೂರು: ಪೆಟ್ರೋಲ್‌, ಡೀಸೆಲ್‌ ದರ ಇಳಿಸಬೇಕು, ವಾಹನಗಳ ‘ಥರ್ಡ್‌ ಪಾರ್ಟಿ’ ವಿಮೆ ಕಂತು ಕಡಿಮೆ ಮಾಡಬೇಕು ಸೇರಿ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಇದೇ 20ರಿಂದ ದೇಶವ್ಯಾಪಿಯಾಗಿ ಅನಿರ್ದಿಷ್ಟ ಅವಧಿ ಸರಕು ಸಾಗಣೆ ವಾಹನಗಳ ಮುಷ್ಕರ ಹಮ್ಮಿಕೊಳ್ಳಲು ಅಖಿಲ ಭಾರತ ಮೋಟಾರ್‌ ಟ್ರಾನ್ಸ್‌ಪೋರ್ಟ್ ಕಾಂಗ್ರೆಸ್‌ ತೀರ್ಮಾನಿಸಿದೆ.

‘ಸರಕು ಸಾಗಣೆ ವಲಯದ ಮೇಲೆ ಗಂಭೀರ ಪರಿಣಾಮ ಬೀರುವ ಸಮಸ್ಯೆಗಳಿಗೆ ಪರಿಹಾರ ಒದಗಿಸಬೇಕು. ಜೊತೆಗೆ ಬೇಡಿಕೆಗಳನ್ನು ಈಡೇರಿಸುವಂತೆ ಹಲವು ಬಾರಿ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದರೂ ಯಾವುದೇ ಪ್ರಯೋಜನ ಆಗಿಲ್ಲ. ಹೀಗಾಗಿ, ಮುಷ್ಕರ ಹಮ್ಮಿಕೊಳ್ಳುವುದು ಅನಿವಾರ್ಯವಾಗಿದೆ’ ಎಂದೂ ಸಂಘಟನೆಯ ಅಧ್ಯಕ್ಷ ಎಸ್‌.ಕೆ. ಮಿತ್ತಲ್‌ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT