ಬೆಂಗಳೂರು: ‘ರಾಜ್ಯದಲ್ಲಿ ಗೃಹ ಬಳಕೆಯ ಎಲ್ಪಿಜಿ ಸಿಲಿಂಡರ್ ಕೊರತೆ ಇಲ್ಲ. ವಾಣಿಜ್ಯ ಬಳಕೆಯ ಸಿಲಿಂಡರ್ ಸರಬರಾಜಿನಲ್ಲಿನ ವ್ಯತ್ಯಯವನ್ನು ವಾರದ ಒಳಗೆ ಬಗೆಹರಿಸಲಾಗುವುದು’ ಎಂದು ಆಹಾರ ಸಚಿವ ಕೆ.ಎಚ್.ಮುನಿಯಪ್ಪ ಹೇಳಿದರು.

ವಿಧಾನಪರಿಷತ್ನಲ್ಲಿ ಕಾಂಗ್ರೆಸ್ನ ರಮೇಶ್ ಬಾಬು, ಐವನ್ ಡಿಸೋಜ, ಕೆ.ಶಿವಕುಮಾರ್, ರಾಮೋಜಿಗೌಡ, ಜಗದೇವ್ ಗುತ್ತೇದಾರ್, ರಾಜೇಂದ್ರ ರಾಜಣ್ಣ ಅವರು ಈ ವಿಷಯ ಪ್ರಸ್ತಾಪಿಸಿದರು.

ಸದಸ್ಯರ ಆತಂಕಗಳಿಗೆ ಪ್ರತಿಕ್ರಿಯಿಸಿದ ಮುನಿಯಪ್ಪ, ಹೋಟೆಲ್, ಕಲ್ಯಾಣ ಮಂಟಪಗಳ ಶುಭ ಕಾರ್ಯಗಳನ್ನು ಅಗತ್ಯ ಸೇವೆ ಎಂದು ಪರಿಗಣಿಸಿ ವಾಣಿಜ್ಯ ಸಿಲಿಂಡರ್ ಪೂರೈಕೆ ಮಾಡಲಾಗುವುದು. ತೈಲ ಕಂಪನಿಗಳ ಜತೆ ಶುಕ್ರವಾರ ಸಭೆ ನಡೆಸಿದ ನಂತರ ಹೋಟೆಲ್ ಉದ್ಯಮಿಗಳ ಜತೆ ಸಮಾಲೋಚನೆ ನಡೆಸಲಾಗುವುದು ಎಂದರು.

ಇರಾನ್ ಈಗಾಗಲೇ ಹೊರ್ಮುಜ್ ಜಲಸಂಧಿ ಮೂಲಕ ಭಾರತದ ಅನಿಲ ಸಾಗಣೆಗೆ ಅನುಮತಿ ನೀಡಿದೆ. ಎರಡು ಹಡಗುಗಳು ಮುಂಬೈ ಬಂದು ಸೇರಿವೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೇಂದ್ರ ಸರ್ಕಾರಕ್ಕೆ ಪತ್ರ ಬರೆದಿದ್ದಾರೆ ಎಂದು ಹೇಳಿದರು.

ಅಗತ್ಯವಿರುವ ಅನಿಲದಲ್ಲಿ ಶೇ 30ರಷ್ಟು ಉತ್ಪಾದನೆ ಭಾರತದಲ್ಲೇ ಆಗುತ್ತದೆ. ಉಳಿದ ಶೇ 70ರಷ್ಟು ಆಮದು ಮಾಡಿಕೊಳ್ಳಲಾಗುತ್ತದೆ. ಹತ್ತು ದಿನಗಳಿಗೆ ಬೇಕಾಗುವ ದಾಸ್ತಾನು ರಾಜ್ಯದಲ್ಲಿದೆ. ಮನೆಗೊಂದು ವಿತರಿಸಲು ಅಡ್ಡಿ ಇಲ್ಲ. ಶಾಲಾ ಬಿಸಿಯೂಟ, ಆಸ್ಪತ್ರೆ ಸೇರಿದಂತೆ ತುರ್ತು ಸೇವೆಗಳಿಗೆ ಕೊರತೆಯಾಗದಂತೆ ಕ್ರಮವಹಿಸಲಾಗಿದೆ ಎಂದು ಮಾಹಿತಿ ನೀಡಿದರು.

ಕೆಲವರು ಆತಂಕಗೊಂಡು ಹೆಚ್ಚುವರಿ ಸಿಲಿಂಡರ್ ಸಂಗ್ರಹ ಮಾಡಲು ಮುಂದಾಗಿದ್ದಾರೆ. ಸಾರ್ವಜನಿಕರು ಆತಂಕಕ್ಕೆ ಒಳಗಾಗಬಾರದು. ಸಾರ್ವಜನಿಕರಿಗೆ ಅಗತ್ಯವಿರುವ ಸಿಲಿಂಡರ್ ಕಾನೂನು ಬದ್ಧವಾಗಿ ಸಿಗಲಿದೆ ಎಂದರು.

ಸಚಿವ ಮುನಿಯಪ್ಪ ಹೇಳಿಕೆಯನ್ನು ಬಿಜೆಪಿ ಸದಸ್ಯರು ಮೇಜುಕುಟ್ಟಿ ಸ್ವಾಗತಿಸಿದರೆ, ಕಾಂಗ್ರೆಸ್ ಸದಸ್ಯರು ಕೇಂದ್ರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.