ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

LS Polls 2024: ಗೆಲುವು ಅರಸಿ ಮಹಾ ವಲಸೆ

Published 3 ಏಪ್ರಿಲ್ 2024, 20:16 IST
Last Updated 3 ಏಪ್ರಿಲ್ 2024, 20:16 IST
ಅಕ್ಷರ ಗಾತ್ರ

ಬೆಂಗಳೂರು: ಚುನಾವಣಾ ಸಮಯದಲ್ಲಿ ರಾಜಕಾರಣಿಗಳು ಗೆಲುವಿನ ಏಕೈಕ ಉದ್ದೇಶದಿಂದ ಸುರಕ್ಷಿತ ಕ್ಷೇತ್ರಗಳನ್ನು ಹುಡುಕುವುದು ಹೊಸತೇನಲ್ಲ. ಇಂದಿರಾಗಾಂಧಿ, ಸೋನಿಯಾಗಾಂಧಿ, ಸುಷ್ಮಾ ಸ್ಮರಾಜ್‌ ಅಂತಹ ನಾಯಕಿಯರೇ ಗೆಲುವಿನ ‘ಗ್ಯಾರಂಟಿ’ಗಾಗಿ ಬೇರೆ ರಾಜ್ಯಗಳಿಂದ ಕರ್ನಾಟಕದವರೆಗೂ ವಲಸೆ ಬಂದಿದ್ದುಂಟು. ಈ ಬಾರಿಯ ಲೋಕಸಭಾ ಚುನಾವಣೆಯಲ್ಲೂ ರಾಜ್ಯದ ಹಲವು ನಾಯಕರು ತಾವು ಹಿಂದೆ ಪ್ರತಿನಿಧಿಸಿದ್ದ ಕ್ಷೇತ್ರಗಳಲ್ಲಿ ಸೋಲು ಕಂಡು ಅಥವಾ ಸೋಲುವ ಭೀತಿಯಿಂದ ಮತ್ತೊಂದು ಕ್ಷೇತ್ರದತ್ತ ಹೆಜ್ಜೆ ಹಾಕಿದ್ದಾರೆ. ಒಂದು ಕ್ಷೇತ್ರದಲ್ಲಿ ನೆಲೆ ನಿಂತ ಕೆಲ ರಾಜಕಾರಣಿಗಳು ಇದೇ ಮೊದಲ ಬಾರಿ ತಮ್ಮದಲ್ಲದ ಹೊಸ ಕ್ಷೇತ್ರಗಳಲ್ಲಿ ರಾಜಕೀಯ ಅದೃಷ್ಟವನ್ನು ಪರೀಕ್ಷೆಗೆ ಒಡ್ಡಿದ್ದಾರೆ.

28 ಲೋಕಸಭಾ ಕ್ಷೇತ್ರಗಳ ಪೈಕಿ 12 ಕ್ಷೇತ್ರಗಳಲ್ಲಿ ಹೊರಗಿನ ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಅಂತಹ ರಾಜಕೀಯ ನೆಲೆಯ ವಲಸೆ ಪರ್ವದಲ್ಲಿ ಕಾಂಗ್ರೆಸ್‌ನ ಏಳು, ಬಿಜೆಪಿಯ ನಾಲ್ಕು ಹಾಗೂ ಜೆಡಿಎಸ್‌ನ ಒಬ್ಬರು ಇದ್ದಾರೆ. ಉಡುಪಿ–ಚಿಕ್ಕಮಗಳೂರು ಕ್ಷೇತ್ರದ ಹಾಲಿ ಸಂಸದೆ ಶೋಭಾ ಕರಂದ್ಲಾಜೆ ಕ್ಷೇತ್ರ ತೊರೆದು ಬೆಂಗಳೂರು ಉತ್ತರ ಕ್ಷೇತ್ರದತ್ತ ವಲಸೆ ಬಂದಿದ್ದಾರೆ. ಬಿಜೆಪಿಯ ಗೋವಿಂದ ಕಾರಜೋಳ, ವಿ. ಸೋಮಣ್ಣ, ಜಗದೀಶ ಶೆಟ್ಟರ, ಜೆಡಿಎಸ್‌ನ ಎಚ್‌.ಡಿ. ಕುಮಾರಸ್ವಾಮಿ ಬೇರೆ ಕ್ಷೇತ್ರಗಳಲ್ಲಿ ಅದೃಷ್ಟ ಪರೀಕ್ಷೆಗೆ ಒಡ್ಡಿದ್ದಾರೆ. ಕಾಂಗ್ರೆಸ್‌ನ ಐವರು ತಮ್ಮ ಸ್ವಂತ ಕ್ಷೇತ್ರಗಳಿಂದ ವಲಸೆ ಬಂದು ಹೊಸ ಕ್ಷೇತ್ರಗಳಲ್ಲಿ ಇದೇ ಮೊದಲ ಚುನಾವಣಾ ಎದುರಿಸುತ್ತಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT