ಸೋಮವಾರ, 20 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಂಗಳೂರು: ಖಾಲಿ ಚೊಂಬು ಹಿಡಿದು ಕಾಂಗ್ರೆಸ್ ನಾಯಕರ ಪ್ರತಿಭಟನೆ

Published 20 ಏಪ್ರಿಲ್ 2024, 7:22 IST
Last Updated 20 ಏಪ್ರಿಲ್ 2024, 7:22 IST
ಅಕ್ಷರ ಗಾತ್ರ

ಬೆಂಗಳೂರು: ‍ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ರಾಜ್ಯಕ್ಕೆ ಅನ್ಯಾಯವೆಸಗುತ್ತಿದೆ ಎಂದು ಆರೋಪಿಸಿ ಕಾಂಗ್ರೆಸ್‌ ನಾಯಕರು ನಗರದ ಮೇಕ್ರಿ ಸರ್ಕಲ್ ಬಳಿ ಚೊಂಬು ಹಿಡಿದು ಪ್ರತಿಟನೆ ನಡೆಸಿದರು.

ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ಸಿಕ್ಕಿದ್ದು ಕೇವಲ ಖಾಲಿ ಚೊಂಚು ಎಂದು ಕಾಂಗ್ರೆಸ್ ನಾಯಕರು ದೂರಿದರು. ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್‌ ಸಿಂಗ್ ಸುರ್ಜೇವಾಲ, ಎಐಸಿಸಿ ಕಾರ್ಯದರ್ಶಿ ಅಭಿಷೇಕ್ ದತ್, ಶಾಸಕ ರಿಜ್ವಾನ್ ಅರ್ಷಾದ್‌ ಸೇರಿದಂತೆ ಹಲವು ಕಾಂಗ್ರೆಸ್ ನಾಯಕರು ಹಾಗೂ ಕಾರ್ಯಕರ್ತರು ಇದ್ದರು.

‌ಈ ಬಗ್ಗೆ ರಣದೀಪ್ ಸಿಂಗ್ ಸುರ್ಜೇವಾಲ ಅವರೂ ಕನ್ನಡದಲ್ಲಿ ಟ್ವೀಟ್ ಮಾಡಿದ್ದು, ಬಿಜೆಪಿ ಪಕ್ಷಕ್ಕೆ ಈ ಮುಂಬರುವ ಲೋಕಸಭಾ ಚುನಾವಣೆಯಲ್ಲಿ 6.5 ಕೋಟಿ ಕನ್ನಡಿಗರು ಚೊಂಬನ್ನು ನೀಡಿ ಮನೆಗೆ ಕಳುಹಿಸಲಿದ್ದಾರೆ ಎಂದು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT