ಶನಿವಾರ, 18 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೋದಿ ‘ಗ್ಯಾರಂಟಿ’– ಬೆಲೆ ಏರಿಕೆ, ಜಿಎಸ್‌ಟಿ ಹೊರೆ: ಡಿ.ಕೆ. ಸುರೇಶ್

Published 21 ಏಪ್ರಿಲ್ 2024, 14:37 IST
Last Updated 21 ಏಪ್ರಿಲ್ 2024, 14:37 IST
ಅಕ್ಷರ ಗಾತ್ರ

ಬೆಂಗಳೂರು: ‘ಬೆಲೆ ಏರಿಕೆ, ಜಿಎಸ್‌ಟಿ ಹೊರೆ, ನಿರುದ್ಯೋಗ ಕೇಂದ್ರ ಬಿಜೆಪಿ ಸರ್ಕಾರ ಹಾಗೂ ಪ್ರಧಾನಿ ನರೇಂದ್ರ ಮೋದಿ ಅವರ ನಿಜವಾದ ಗ್ಯಾರಂಟಿ’ ಎಂದು ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಿ.ಕೆ. ಸುರೇಶ್ ವಾಗ್ದಾಳಿ ನಡೆಸಿದರು.

ಗ್ರಾಮಾಂತರ ಕ್ಷೇತ್ರ ವ್ಯಾಪ್ತಿಯ ಬೆಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಭಾನುವಾರ ಪ್ರಚಾರ ನಡೆಸಿ ಮಾತನಾಡಿದ ಅವರು, ‘ಈ ಬಾರಿ ಲೋಕಸಭೆ ಚುನಾವಣೆಯಲ್ಲಿ ನಿಮ್ಮೆಲ್ಲರ ಆಶೀರ್ವಾದ ಕೇಳಲು ನಾನು ಬಂದಿದ್ದೇನೆ. ಈ ದೇಶದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದು 10 ವರ್ಷವಾಗಿದೆ. ರಾಜ್ಯದ ಜನರ ಆಶೀರ್ವಾದದಿಂದ ಕಾಂಗ್ರೆಸ್ ಸರ್ಕಾರ ಕರ್ನಾಟಕದಲ್ಲಿ ಅಧಿಕಾರಕ್ಕೆ ಬಂದು 10 ತಿಂಗಳಾಗಿವೆ. ಕಾಂಗ್ರೆಸ್ ಸರ್ಕಾರದ ಈ ಹತ್ತು ತಿಂಗಳ ಸಾಧನೆ ಏನು, ಕೇಂದ್ರ ಬಿಜೆಪಿ ಸರ್ಕಾರ 10 ವರ್ಷಗಳ ಸಾಧನೆ ಏನು ಎಂಬುದನ್ನು ಈ ಚುನಾವಣೆಯಲ್ಲಿ ಚರ್ಚೆ ಮಾಡಬೇಕು’ ಎಂದರು.

ಮೋದಿ ಗ್ಯಾರಂಟಿ ಯಾರ ಕೈಗೂ ತಲುಪಲ್ಲ. ಯಾರ ಖಾತೆಗೆ ₹ 15 ಲಕ್ಷ ಬಂದಿದೆ?  ಮೋದಿ ಬಹಳ ಒಳ್ಳೆಯವರು, ಅವರು ₹ 15 ಲಕ್ಷ ಕೊಟ್ಟಿರಬೇಕು. ಇಲ್ಲೇ ಯಾರೋ ಮಧ್ಯದಲ್ಲಿ ಅದನ್ನು ತಿಂದಿರಬೇಕು’ ಎಂದು ವ್ಯಂಗ್ಯವಾಡಿದರು.

‘ಬೆಲೆ ಏರಿಕೆ ಕಡಿಮೆ ಆಗಿದೆಯೇ? ಅಡುಗೆ ಎಣ್ಣೆ, ಅಕ್ಕಿ, ಸಕ್ಕರೆ, ಚಿನ್ನದ ಬೆಲೆ ಕಮ್ಮಿ ಆಗಿದೆಯೇ? ಚಿನ್ನ ಕೊಳ್ಳುವುದು ಇರಲಿ, ಚಿನ್ನದ ಅಂಗಡಿ ಕಡೆ ನೋಡುವಂತೆಯೇ ಇಲ್ಲ. ನಮ್ಮ ಸರ್ಕಾರ ಬೆಲೆ ಏರಿಸಿದೆ ಎಂದು ನೀವೆಲ್ಲ ಟೀಕೆ ಮಾಡುತ್ತಿದ್ದಿರಿ. ಕೇಂದ್ರದಲ್ಲಿ ನಮ್ಮ ಸರ್ಕಾರ ಇದ್ದಾಗ 10 ಗ್ರಾಂಗೆ ₹ 27 ಸಾವಿರದಿಂದ ₹ 28 ಸಾವಿರ ಇದ್ದ ಚಿನ್ನ, ಈಗ ₹75 ಸಾವಿರ ಆಗಿದೆ. ಇನ್ನು ಒಂದು ಟನ್‌ ಕಬ್ಬಿಣದ ದರ ₹30 ಸಾವಿರದಿಂದ ₹75 ಸಾವಿರ ಮಾಡಿದ್ದಾರೆ. ಇದನ್ನೆಲ್ಲ ಯಾರಿಗೆ ಹೇಳಬೇಕು’ ಎಂದು ಪ್ರಶ್ನಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT