ನವದೆಹಲಿ: ಬೆಂಗಳೂರಿನಲ್ಲಿ ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಸ್ಥಳ ಆಖೈರು, ವಿಜಯಪುರ ವಿಮಾನ ನಿಲ್ದಾಣ ಲೋಕಾರ್ಪಣೆಗೆ ಒಪ್ಪಿಗೆ, ಹುಬ್ಬಳ್ಳಿ ಮತ್ತು ಬೆಳಗಾವಿ ವಿಮಾನ ನಿಲ್ದಾಣಗಳನ್ನು ಅಂತರರಾಷ್ಟ್ರೀಯ ಮಟ್ಟಕ್ಕೆ ಏರಿಸುವುದು ಸೇರಿದಂತೆ ಕರ್ನಾಟಕದ ವೈಮಾನಿಕ ವಲಯದ ಹಲವು ಬೇಡಿಕೆಗಳನ್ನು ಈಡೇರಿಸುವಂತೆ ಮೂಲಸೌಕರ್ಯ ಅಭಿವೃದ್ಧಿ ಸಚಿವ ಎಂ.ಬಿ. ಪಾಟೀಲ ಅವರು ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದರು.

ಕೇಂದ್ರ ನಾಗರಿಕ ವಿಮಾನಯಾನ ಸಚಿವ ಕೆ.ರಾಮಮೋಹನ್ ನಾಯ್ಡು ಅವರನ್ನು ಗುರುವಾರ ಭೇಟಿ ಮಾಡಿ ಮನವಿ ಸಲ್ಲಿಸಿದರು.

ʻಬೆಂಗಳೂರಿನ ಸಮೀಪ ಮತ್ತೊಂದು ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಿಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ. ಇದಕ್ಕಾಗಿ ಆಯ್ಕೆ ಮಾಡಿದ್ದ ಮೂರು ಸ್ಥಳಗಳನ್ನು ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರದ ಉನ್ನತ ಮಟ್ಟದ ತಂಡವು ಪರಿಶೀಲಿಸಿದೆ. ಹೀಗಾಗಿ ಒಂದು ಸ್ಥಳವನ್ನು ಆದಷ್ಟು ಶೀಘ್ರವೇ ಆಖೈರು ಮಾಡಿದರೆ, ರಾಜ್ಯವು ಮುಂದಿನ ಕೆಲಸ ಕೈಗೆತ್ತಿಕೊಳ್ಳಲು ಅನುಕೂಲವಾಗಲಿದೆ’ ಎಂದು ಪಾಟೀಲ ತಿಳಿಸಿದ್ದಾರೆ. ವಿಜಯಪುರದಲ್ಲಿ ಉದ್ಘಾಟನೆಗೆ ಸಿದ್ಧವಾಗಿರುವ ವಿಮಾನ ನಿಲ್ದಾಣಕ್ಕೆ ಕೇಂದ್ರ ಪರಿಸರ ಇಲಾಖೆಯ ಅನುಮತಿ ಬಾಕಿರುವ ಬಗ್ಗೆ ಚರ್ಚಿಸಿದರು.

ಪ್ರಾದೇಶಿಕ ಮತ್ತು ಆರ್ಥಿಕ ಅಭಿವೃದ್ಧಿ ಹಾಗೂ ಉತ್ತರ ಕರ್ನಾಟಕ, ದಕ್ಷಿಣ ಮಹಾರಾಷ್ಟ್ರ ಮತ್ತು ಗೋವಾ ಈ ಭಾಗಗಳಿಗೆ ವಿಮಾನ ಸಂಪರ್ಕ ಸುಧಾರಣೆಯ ಅಗತ್ಯಗಳನ್ನು ಪರಿಗಣಿಸಿ ಹುಬ್ಬಳ್ಳಿ ಮತ್ತು ಬೆಳಗಾವಿ ವಿಮಾನ ನಿಲ್ದಾಣಗಳನ್ನು ಅಂತರರಾಷ್ಟ್ರೀಯ ದರ್ಜೆಗೇರಿಸಬೇಕೆಂದು ಪಾಟೀಲ ಮನವಿ ಸಲ್ಲಿಸಿದರು.

ಎರಡೂ ವಿಮಾನ ನಿಲ್ದಾಣಗಳಲ್ಲಿ ಗಂಟೆಗೆ 2,400 ಪ್ರಯಾಣಿಕರನ್ನು ನಿರ್ವಹಿಸಬಲ್ಲ ಹೊಸ ಟರ್ಮಿನಲ್ ನಿರ್ಮಿಸಲಾಗುತ್ತಿದೆ. ಎ321 ದರ್ಜೆಯ ವಿಮಾನಗಳ ಕಾರ್ಯಾಚರಣೆ ಸಾಧ್ಯವಾಗುವಂತೆ 12 ಪಾರ್ಕಿಂಗ್ ಬೇ ಅಭಿವೃದ್ಧಿಪಡಿಸಲಾಗುತ್ತಿದ್ದು, ರಾತ್ರಿ ವೇಳೆಯಲ್ಲೂ ಲ್ಯಾಂಡಿಂಗ್ ಆಗುವಂತೆ ಕ್ರಮ ವಹಿಸಲಾಗಿದೆ. ಜತೆಗೆ ಬೆಳಗಾವಿಯಿಂದ ಫೌಂಡ್ರಿ, ಏರೋಸ್ಪೇಸ್ ಸಾಧನಗಳು, ಅಲ್ಯುಮಿನಿಯಂ ಸಾಧನಗಳು, ಹಣ್ಣು ಮತ್ತು ತರಕಾರಿಗಳನ್ನು ಸಾಗಿಸಲು ಪ್ರತ್ಯೇಕ ಟರ್ಮಿನಲ್ ಇದೆ. ಇದಲ್ಲದೆ ಬೆಳಗಾವಿಯಲ್ಲಿ 3 ವಿ.ವಿಗಳು, 3 ಮೆಡಿಕಲ್ ಕಾಲೇಜುಗಳು, ಕೆಎಲ್ಇ ವಿವಿ ಎಲ್ಲವೂ ಇದ್ದು ವಿಶೇಷವಾಗಿ ಮಲೇಷ್ಯಾದಿಂದ ಹೆಚ್ಚಿನ ವಿದ್ಯಾರ್ಥಿಗಳು ಇಲ್ಲಿಗೆ ಬರುತ್ತಿದ್ದಾರೆ ಎಂದು ಅವರು ಮನದಟ್ಟು ಮಾಡಿಕೊಟ್ಟರು.

ಹುಬ್ಬಳ್ಳಿಯಲ್ಲಿ 16,900 ಚ.ಮೀ. ವಿಸ್ತೀರ್ಣದ ಹೊಸ ಟರ್ಮಿನಲ್ ನಿರ್ಮಿಸಲಾಗುತ್ತಿದ್ದು, ಎಬಿ320 ದರ್ಜೆಯ ವಿಮಾನಗಳ ನಿರ್ವಹಣೆ ಸಾಧ್ಯವಾಗುವಂತೆ ಮಾಡಲಾಗುತ್ತಿದೆ. ಇಲ್ಲಿರುವ ಕಾರ್ಗೋ ಟರ್ಮಿನಲ್ನಲ್ಲಿ ಈಗ ವಾರ್ಷಿಕ 15 ಟನ್ ಸರಕು ಸಾಗಣೆ ಆಗುತ್ತಿದೆ. ಜತೆಗೆ ವರ್ಷಕ್ಕೆ 3 ಲಕ್ಷ ಪ್ರಯಾಣಿಕರ ನಿರ್ವಹಣೆ ನಡೆಯುತ್ತಿದೆ ಎಂದು ಅವರು ಗಮನ ಸೆಳೆದರು.

ನಾಗರಿಕ ವಿಮಾನಯಾನ ವಲಯದಲ್ಲಿ ಕರ್ನಾಟಕ ರಾಜ್ಯವನ್ನು ಪಾಲುದಾರ ಎಂದು ಪರಿಗಣಿಸಬೇಕು. ಇದರಿಂದಾಗಿ ವಿಮಾನ ನಿಲ್ದಾಣ ಪ್ರಾಧಿಕಾರ ನಿರ್ವಹಿಸುತ್ತಿರುವ ರಾಜ್ಯದ ಮಂಗಳೂರು, ಮೈಸೂರು, ಹುಬ್ಬಳ್ಳಿ, ಕಲಬುರಗಿ ಮತ್ತು ಬೆಳಗಾವಿ ವಿಮಾನ ನಿಲ್ದಾಣಗಳಿಂದ ರಾಜ್ಯಕ್ಕೂ ಲಾಭದ ಪಾಲು ಸಿಗಲಿದೆ. ಈ ವಿಷಯದಲ್ಲಿ ರಾಜ್ಯದ ಪಾತ್ರವನ್ನು ಭೂಸ್ವಾಧೀನ ಮತ್ತು ಸೌಕರ್ಯಗಳ ಅಭಿವೃದ್ಧಿಗೆ ಮಾತ್ರ ಸೀಮಿತಗೊಳಿಸಬಾರದು ಎಂದು ಕೋರಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.