ಬೆಂಗಳೂರು: ಪ್ರಥಮ ಎಂ-ಫಾರ್ಮಾ ಮತ್ತು ಫಾರ್ಮಾ-ಡಿ ಕೋರ್ಸುಗಳ 2025ನೇ ಸಾಲಿನ ಪ್ರವೇಶಕ್ಕೆ ಅರ್ಹತಾ ಪಟ್ಟಿ ಮತ್ತು ಸೀಟು ಲಭ್ಯತಾ ಪಟ್ಟಿಯನ್ನು ಪ್ರಕಟಿಸಲಾಗಿದ್ದು, ಅರ್ಹ ಅಭ್ಯರ್ಥಿಗಳು ಫೆ.7ರಿಂದ ಫೆ.10ರ ಬೆಳಿಗ್ಗೆ 11ರವರೆಗೆ ಇಚ್ಛೆಗಳನ್ನು ಆದ್ಯತಾ ಕ್ರಮದಲ್ಲಿ ನಮೂದಿಸಲು ಅವಕಾಶ ನೀಡಲಾಗಿದೆ.

ಫೆ.5ರಿಂದ ಫೆ.9ರವರೆಗೆ ನಿಗದಿತ ಲಿಂಕ್ಗೆ ಹೋಗಿ ಪರಿಶೀಲನಾ ಚೀಟಿ ಡೌನ್ಲೋಡ್ ಮಾಡಿಕೊಳ್ಳಬಹುದು. ಆನ್ಲೈನ್ ಅರ್ಜಿಯಲ್ಲಿ ಪರಿಶಿಷ್ಟ ಜಾತಿ ಮೀಸಲಾತಿ ಕೋರಿರುವ ಅಭ್ಯರ್ಥಿಗಳು (ಪರಿಶಿಷ್ಟ ಜಾತಿ-ಎ, ಬಿ ಮತ್ತು ಸಿ) ಒಳಮೀಸಲಾತಿ ಹಾಗೂ ಜಾತಿಪ್ರಮಾಣ ಪತ್ರದ ಆರ್.ಡಿ.ಸಂಖ್ಯೆ ನಮೂದಿಸಿ ವೆರಿಫಿಕೇಷನ್ ಡೌನ್ ಲೋಡ್ ಮಾಡಿಕೊಳ್ಳಬೇಕು ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಆಡಳಿತಾಧಿಕಾರಿ ಇಸ್ಲಾವುದ್ದೀನ್ ಗದ್ಯಾಳ ಹೇಳಿದ್ದಾರೆ.

ಅಣಕು ಸೀಟು ಹಂಚಿಕೆ ಫಲಿತಾಂಶ ಫೆ.10ರಂದು ಪ್ರಕಟವಾಗಲಿದೆ. ಫೆ.10ರಿಂದ ಫೆ.11ರ ಮಧ್ಯಾಹ್ನದವರೆಗೆ ಆಯ್ಕೆಗಳನ್ನು ಬದಲಿಸಲು ಅವಕಾಶ ನೀಡಲಾಗುತ್ತದೆ. ಫೆ.11ರ ಸಂಜೆ ನೈಜ ಸೀಟು ಹಂಚಿಕೆಯ ಫಲಿತಾಂಶ ಪ್ರಕಟಗೊಳ್ಳಲಿದೆ. ಸೀಟು ಆಯ್ಕೆ ಮಾಡಿಕೊಳ್ಳುವ ಅಭ್ಯರ್ಥಿಗಳು ಫೆ.12ರಿಂದ ಫೆ.16ರ ಒಳಗೆ ಪ್ರವೇಶ ಪಡೆಯಬೇಕು ಎಂದು ಸೂಚಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.