ಅನಾರೋಗ್ಯದ ಕಾರಣಮಾತೆಮಹಾದೇವಿ ಅವರಿಗೆ ಬಾಗಲಕೋಟೆಯ ಕೆರೂಡಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆರೋಗ್ಯ ಸ್ಥಿತಿ ಗಂಭೀರವಾಗಿರುವ ಕಾರಣ ಹೆಚ್ಚಿನ ಚಿಕಿತ್ಸೆಗಾಗಿ ಎರಡು ದಿನಗಳ ಹಿಂದೆ ಬೆಂಗಳೂರಿಗೆ ಕರೆದೊಯ್ಯಲಾಗಿದೆ. ಅಲ್ಲಿ ಅವರಿಗೆ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಬಸವಧರ್ಮ ಪೀಠದ ಮೂಲಗಳು ತಿಳಿಸಿವೆ.