ಕಲಬುರ್ಗಿ: ಶನಿವಾರ ರಾತ್ರಿ ನಿಧನರಾಗಿದ್ದ ಸೇಡಂ ತಾಲ್ಲೂಕಿನ ಯಾನಾಗುಂದಿಯ ರೂಪರಹಿತ ಅಹಿಂಸಾ ಯೋಗೀಶ್ವರ ವೀರಧರ್ಮಜ ಪೀಠದ ಮಾತೆ ಮಾಣಿಕೇಶ್ವರಿ ಅವರ ಅಂತ್ಯಸಂಸ್ಕಾರ ಸಕಲ ಸರ್ಕಾರಿ ಗೌರವಗಳೊಂದಿಗೆ ಮಾಣಿಕ್ಯಗಿರಿಯ ಆಶ್ರಮದ ಆವರಣದಲ್ಲಿ ಸೋಮವಾರ ಮಧ್ಯಾಹ್ನ ನೆರವೇರಿತು.

ಸರ್ಕಾರದ ಪರವಾಗಿ ಪಶು ಸಂಗೋಪನೆ ಸಚಿವ ಪ್ರಭು ಚವ್ಹಾಣ್ ಭಾಗವಹಿಸಿ ಮಾಣಿಕೇಶ್ವರಿ ಅಮ್ಮನವರ ಪಾರ್ಥಿವ ಶರೀರಕ್ಕೆ ಅಂತಿಮ ನಮನ ಸಲ್ಲಿಸಿದರು. ಮಧ್ಯಾಹ್ನ 1 ಗಂಟೆಯವರೆಗೆ ಅಂತಿಮ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿತ್ತು. ಆದರೆ, ಅಪಾರ ಸಂಖ್ಯೆಯ ಭಕ್ತರು ಉರಿ ಬಿಸಿಲು, ಝಳವನ್ನೂ ಲೆಕ್ಕಿಸದೇ ಮಾಣಿಕ್ಯಗಿರಿಯತ್ತ ಬರುತ್ತಲೇ ಇದ್ದುದನ್ನು ಗಮನಿಸಿದ ಆಶ್ರಮದ ಆಡಳಿತ ಮಂಡಳಿಯವರು ಮತ್ತೆ ಒಂದು ಗಂಟೆ ಅಂತಿಮ ದರ್ಶನಕ್ಕೆ ಅವಕಾಶ ಕಲ್ಪಿಸಿದರು.

ಆಶ್ರಮದಲ್ಲಿ ಈ ಮೊದಲೇ ನಿರ್ಮಿಸಿದ್ದ ಗುಹೆಯಲ್ಲಿ ಅಂತ್ಯಸಂಸ್ಕಾರ ನೆರವೇರಿಸಲಾಯಿತು. ಕರ್ನಾಟಕ, ತೆಲಂಗಾಣ ಹಾಗೂ ಆಂಧ್ರ
ಪ್ರದೇಶದಿಂದ ಬಂದಿದ್ದ ಸ್ವಾಮೀಜಿಗಳು ವಿಧಿವಿಧಾನ ನೆರವೇರಿಸಿದರು. ಬಂದ ಭಕ್ತರಿಗೆ ಆಶ್ರಮದ ಆವರಣದಲ್ಲಿ ಅನ್ನಸಂತರ್ಪಣೆ ಮಾಡಲಾಯಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.