ಭಾನುವಾರ, 28 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಾಡಾಳ್‌ ವಿರೂಪಾಕ್ಷಪ್ಪ ಬಿಜೆಪಿ ಸೇರ್ಪಡೆ

Published 7 ಫೆಬ್ರುವರಿ 2024, 16:12 IST
Last Updated 7 ಫೆಬ್ರುವರಿ 2024, 16:12 IST
ಅಕ್ಷರ ಗಾತ್ರ

ಬೆಂಗಳೂರು: ಮಾಜಿ ಶಾಸಕ ಮಾಡಾಳ್‌ ವಿರೂಪಾಕ್ಷಪ್ಪ ಮತ್ತು ಅವರ ಪುತ್ರ ಮಾಡಾಳ್‌ ಮಲ್ಲಿಕಾರ್ಜುನ್ ಅವರು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಸಮ್ಮುಖದಲ್ಲಿ ಬಿಜೆಪಿ ಸೇರಿದರು.

ಬುಧವಾರ ಪಕ್ಷದ ಕಚೇರಿಯಲ್ಲಿ ವಿರೂಪಾಕ್ಷಪ್ಪ, ಮಲ್ಲಿಕಾರ್ಜುನ್ ಅವರ ಜತೆ  ಡಾ. ರವಿಕುಮಾರ್, ಗುರುಸಿದ್ದನಗೌಡ ಅವರೂ ಬಿಜೆಪಿ ಸೇರಿದರು. ಮಾಡಾಳ್‌ ವಿರೂಪಾಕ್ಷಪ್ಪ ಲಂಚ ಪ್ರಕರಣದ ಆರೋಪದ ಹಿನ್ನೆಲೆಯಲ್ಲಿ ವಿಧಾನಸಭಾ ಚುನಾವಣೆಗೂ ಮೊದಲು ಪಕ್ಷದಿಂದ ವಜಾಗೊಂಡಿದ್ದರು.

ಸೇರ್ಪಡೆ ಕಾರ್ಯಕ್ರಮದಲ್ಲಿ ಮಾತನಾಡಿದ ವಿಜಯೇಂದ್ರ ಅವರು, ಇತ್ತೀಚೆಗೆ ಜಗದೀಶ ಶೆಟ್ಟರ್‌ ಅವರು ಕಾಂಗ್ರೆಸ್‌ ತೊರೆದು ಬಿಜೆಪಿ ಸೇರಿದರು. ಇದೀಗ ಮಾಡಾಳ್‌ ವಿರೂಪಾಕ್ಷಪ್ಪ ಮತ್ತು ಮಲ್ಲಿಕಾರ್ಜುನ್ ಸೇರ್ಪಡೆಯಿಂದ ಪಕ್ಷಕ್ಕೆ ಇನ್ನಷ್ಟು ಶಕ್ತಿ ಬಂದಿದೆ ಎಂದರು.

ಕಳೆದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಗೆ ಹಿನ್ನಡೆ ಆಗಲು ಹಲವಾರು ಕಾರಣಗಳಿವೆ. ಆಗ ಇದ್ದ ವಾತಾವರಣ ಮತ್ತು ಇವತ್ತಿನ ವಾತಾವರಣಕ್ಕೆ ಅಜಗಜಾಂತರ ವ್ಯತ್ಯಾಸವಿದೆ. ರಾಜ್ಯದ ಕಾಂಗ್ರೆಸ್‌ ಸರ್ಕಾರವು ಕೆಲವು ತಿಂಗಳ ಹಿಂದೆ 20 ರಿಂದ 22 ಕ್ಷೇತ್ರಗಳಲ್ಲಿ ಗೆಲ್ಲುವ ವಿಶ್ವಾಸದಲ್ಲಿತ್ತು. ಈಗ ರಾಜ್ಯದಲ್ಲಿ ಸಂಪೂರ್ಣ ಬಿಜೆಪಿ ಪರವಾದ ವಾತಾವರಣವಿದೆ ಎಂದು ಅವರು ಹೇಳಿದರು.

ದೇಶದಲ್ಲಿ ನರೇಂದ್ರಮೋದಿ ಅವರ ಪರವಾದ ಅಲೆ ಮತ್ತೊಮ್ಮೆ ಕಾಣುತ್ತಿದೆ. ಇದರ ಪರಿಣಾಮ ಯಾವುದೇ ಸಂದರ್ಭದಲ್ಲಿ ಲೋಕಸಭೆ ಚುನಾವಣೆ ನಡೆದರೂ ಸಹ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಒಂದು ಕ್ಷೇತ್ರದಲ್ಲಿ ಗೆಲ್ಲುವುದೂ ಕಷ್ಟ. ವಿಧಾನಸಭೆಗೆ ನಾಳೆ ಚುನಾವಣೆ ನಡೆದರೂ ಬಿಜೆಪಿ 130–140 ಸ್ಥಾನಗಳನ್ನು ಗೆಲ್ಲುವ ಸ್ಥಿತಿಯಲ್ಲಿದೆ ಎಂದೂ ವಿಜಯೇಂದ್ರ ತಿಳಿಸಿದರು.

ರಾಜ್ಯ ಯುವ ಮೋರ್ಚಾ ಅಧ್ಯಕ್ಷ ಮತ್ತು ಶಾಸಕ ಧೀರಜ್ ಮುನಿರಾಜು, ಮಾಜಿ ಸಚಿವ ಎಸ್‌.ಎ. ರವೀಂದ್ರನಾಥ್, ಮಾಜಿ ಶಾಸಕ ಎಂ.ಪಿ.ರೇಣುಕಾಚಾರ್ಯ, ಮಾಯಕೊಂಡ ಬಸವರಾಜ್ ಮತ್ತಿತರರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT