ಶಿವಮೊಗ್ಗ: ನೀಟ್-ಯುಜಿ ಪರೀಕ್ಷೆ ಅಕ್ರಮದ ಜವಾಬ್ದಾರಿ ಪ್ರಧಾನಿ ನರೇಂದ್ರ ಮೋದಿ ತೆಗೆದುಕೊಂಡು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ತಲೆದಂಡ ಪಡೆಯಲಿ ಎಂದು ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಆಗ್ರಹಿಸಿದರು.

ನೀಟ್ ಪರೀಕ್ಷೆ ಅಕ್ರಮದಿಂದ ಲಕ್ಷಾಂತರ ವಿದ್ಯಾರ್ಥಿಗಳು ಸಂಕಷ್ಟಕ್ಕೆ ತುತ್ತಾಗಿದ್ದಾರೆ. ಐವರು ಪ್ರಾಣ ತೆಗೆದುಕೊಂಡಿದ್ದಾರೆ. ಅದರ ನೈತಿಕ ಹೊಣೆ ಪ್ರಧಾನಿ ನರೇಂದ್ರ ಮೋದಿ ವಹಿಸಿಕೊಳ್ಳಲಿ ಎಂದು ಶುಕ್ರವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಆಗ್ರಹಿಸಿದರು.

ಅತಿಥಿ ಶಿಕ್ಷಕರ ನೇಮಕ: ಈ ಬಾರಿ ಜೂನ್ ಆರಂಭದಿಂದಲೇ ಅತಿಥಿ ಶಿಕ್ಷಕರ ನೇಮಕಾತಿಗೆ ಚಾಲನೆ ನೀಡಲಾಗುತ್ತಿದೆ. ಒಟ್ಟು 52 ಸಾವಿರ 'ಅತಿಥಿ'ಗಳ ನೇಮಕ ಮಾಡಿಕೊಳ್ಳಲಾಗುವುದು ಎಂದರು.

ಶಿಕ್ಷಣ ಇಲಾಖೆಯಲ್ಲಿ ಈ ಹಿಂದೆ ಇದ್ದ ಬಹಳಷ್ಟು ನ್ಯೂನತೆಗಳನ್ನು ಈಗ ಸರಿಪಡಿಸಲಾಗಿದೆ. ಶಿಕ್ಷಣದ ಗುಣಮಟ್ಟವೂ ಹೆಚ್ಚಾಗಿದ್ದು, ಈ ಬಾರಿಯ ಎಸ್ಸೆಸ್ಸೆಲ್ಸಿಯಲ್ಲಿ ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾಗುವವರ ಸಂಖ್ಯೆ ಶೇ 6.4ರಷ್ಟು ಹೆಚ್ಚಳಗೊಂಡಿರುವುದೇ ಅದಕ್ಕೆ ಸಾಕ್ಷಿ ಎಂದರು.

ಕೆಪಿಎಸ್ ದೇಶಕ್ಕೆ ಮಾದರಿ: ಕರ್ನಾಟಕ ಪಬ್ಲಿಕ್ ಶಾಲೆಗಳ (ಕೆಪಿಎಸ್) ಪರಿಕಲ್ಪನೆ ಈಗ ದೇಶದಲ್ಲಿಯೇ ಮಾದರಿ ಆಗಿದ್ದು, ಇದೇ ಮಾದರಿ ಅಳವಡಿಸಿಕೊಂಡು ತೆಲಂಗಾಣ ಸರ್ಕಾರ ಟಿಪಿಎಸ್ ಆರಂಭಿಸಲು ಮುಂದಾಗಿದೆ. ಆ ರಾಜ್ಯದ ಶಿಕ್ಷಣ ಇಲಾಖೆ ಅಧಿಕಾರಿಗಳು ಬೆಂಗಳೂರಿಗೆ ಬಂದು ಕೆಪಿಎಸ್ ಬಗ್ಗೆ ಅಧ್ಯಯನ ನಡೆಸಿದ್ದಾರೆ ಎಂದು ಹರ್ಷ ವ್ಯಕ್ತಪಡಿಸಿದರು.

ಶಿವಮೊಗ್ಗದಲ್ಲಿ 19 ಕೆಪಿಎಸ್ ಶಾಲೆಗಳು ಸೇರಿದಂತೆ ರಾಜ್ಯದಲ್ಲಿ 1,000 ಕೆಪಿಎಸ್ ಶಾಲೆಗಳ ನಿರ್ಮಾಣಕ್ಕೆ ಜೂನ್ 1ರಂದು ಶಿವಮೊಗ್ಗದಲ್ಲಿ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಪ್ರತೀ ಶಾಲೆಗೆ ಕನಿಷ್ಟ ₹3.5 ಕೋಟಿ ವ್ಯಯಿಸಲಾಗುತ್ತಿದೆ ಎಂದು ಹೇಳಿದ ಮಧು ಬಂಗಾರಪ್ಪ, ಇದೇ ವೇಳೆ ಇಲ್ಲಿನ ಅಲ್ಲಮಪ್ರಭು ಮೈದಾನದಲ್ಲಿ ಸಿಎಂ ಕಾರ್ಯಕ್ರಮದ ಪೂರ್ವ ಸಿದ್ಧತೆಯನ್ನು ಪರಿಶೀಲಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.