ಬೆಂಗಳೂರು: ಮಾದಿಗ ಸಮುದಾಯದ ಸರ್ವಾಂಗೀಣ ಅಭಿವೃದ್ಧಿ ಮತ್ತು ಸಬಲೀಕರಣಕ್ಕಾಗಿ 2015ರಲ್ಲಿ ಸ್ಥಾಪಿತವಾದ ಕರ್ನಾಟಕ ಮಾದರ ಮಹಾಸಭೆಯನ್ನು ಪುನರ್ ರಚಿಸಲಾಗಿದ್ದು, ನೂತನ ಅಧ್ಯಕ್ಷರಾಗಿ ಆಹಾರ ಸಚಿವ ಕೆ.ಎಚ್.ಮುನಿಯಪ್ಪ ಆಯ್ಕೆಯಾಗಿದ್ದಾರೆ.

ಸಂಸದ ಗೋವಿಂದ ಕಾರಜೋಳ, ಕೇಂದ್ರದ ಮಾಜಿ ಸಚಿವ ಎ. ನಾರಾಯಣಸ್ವಾಮಿ (ಉಪಾಧ್ಯಕ್ಷರು), ಅಬಕಾರಿ ಸಚಿವ ಆರ್.ಬಿ. ತಿಮ್ಮಾಪುರ, ಮಾಜಿ ಸಚಿವ ಎಚ್.ಆಂಜನೇಯ (ಪ್ರಧಾನ ಕಾರ್ಯದರ್ಶಿಗಳು), ಮಾಜಿ ಸಂಸದ ಬಿ.ಎನ್.ಚಂದ್ರಪ್ಪ, ಶಾಸಕರಾದ ದುರ್ಯೋಧನ ಐಹೊಳೆ, ಡಾ.ತಿಮ್ಮಯ್ಯ, ಮಾಜಿ ಶಾಸಕ ಕೆ.ಎಂ. ತಿಮ್ಮರಾಯಪ್ಪ, ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಆಯೋಗದ ಮಾಜಿ ಅಧ್ಯಕ್ಷ ಎ. ಮುನಿಯಪ್ಪ, ಕಲಬುರಗಿಯ ಜಿ. ವಿಜಯ ಕುಮಾರ್, ರಾಮಕೃಷ್ಣ (ಜಂಟಿ ಕಾರ್ಯದರ್ಶಿಗಳು) ಆಯ್ಕೆಯಾಗಿದ್ದಾರೆ.

ಆಯ್ಕೆಯ ನಂತರ ಮಾತನಾಡಿದ ಕೆ.ಎಚ್.ಮುನಿಯಪ್ಪ, ‘ಪರಿಶಿಷ್ಟ ಜಾತಿಗಳಲ್ಲಿ ಅತ್ಯಂತ ಹಿಂದುಳಿದ ಜಾತಿಯಾದ ಮಾದಿಗ ಸಮುದಾಯದ ಶೈಕ್ಷಣಿಕ, ಸಾಮಾಜಿಕ, ಆರ್ಥಿಕ ಹಾಗೂ ಸಾಂಸ್ಕೃತಿಕ ಸಬಲೀಕರಣಕ್ಕೆ ಕರ್ನಾಟಕ ಮಾದರ ಮಹಾಸಭೆ ಬದ್ಧವಾಗಿದೆ. ಸಮುದಾಯದ ಹಿತಾಸಕ್ತಿಗೆ ಸರ್ಕಾರದ ವಿವಿಧ ಯೋಜನೆಗಳು ಮತ್ತು ಸೌಲಭ್ಯಗಳು ತಲುಪುವಂತೆ ಕ್ರಮ ಕೈಗೊಳ್ಳಲಾಗುವುದು’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.