ಮಹಾಲಿಂಗಪುರ: ‘2027ರ ಜನಗಣತಿ ಸಂಪೂರ್ಣ ಡಿಜಿಟಲ್ ಆಧಾರಿತ ಪ್ರಕ್ರಿಯೆಯಾಗಿದೆ. ದೋಷಮುಕ್ತ ಹಾಗೂ ಪಾರದರ್ಶಕ ಮಾಹಿತಿ ಸಂಗ್ರಹಣೆಗೆ ತರಬೇತಿ ಸಹಕಾರಿಯಾಗಿದೆ. ಸಾರ್ವಜನಿಕರಿಗೆ ಆನ್ಲೈನ್ ಮೂಲಕ ಮಾಹಿತಿ ಸಲ್ಲಿಸಲು ಸ್ವಯಂ-ಗಣತಿ ವ್ಯವಸ್ಥೆ ನೀಡಲಾಗುತ್ತಿದೆ’ ಎಂದು ತಹಶೀಲ್ದಾರ್ ಗಿರೀಶ ಸ್ವಾದಿ ಹೇಳಿದರು.

ಪಟ್ಟಣದ ಕೆಎಲ್ಇ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಜಿಲ್ಲಾಡಳಿತ, ಪುರಸಭೆ ಕಾರ್ಯಾಲಯ ವತಿಯಿಂದ ಜನಗಣತಿ-2027ರ ಅಂಗವಾಗಿ ಗಣತಿದಾರರು ಹಾಗೂ ಮೇಲ್ವಿಚಾರಕರ ತರಬೇತಿ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದರು.

‘ದೇಶದ ಅಭಿವೃದ್ಧಿ ಯೋಜನೆಗಳ ರೂಪಿಸುವಿಕೆಯಲ್ಲಿ ಜನಗಣತಿ ಅಂಕಿ-ಅಂಶಗಳು ಅಡಿಪಾಯವಾಗಿದ್ದು, ಈ ಕಾರ್ಯದಲ್ಲಿ ತೊಡಗಿಸಿಕೊಳ್ಳುವವರು ಪ್ರಾಮಾಣಿಕ ಹಾಗೂ ಸಮರ್ಪಕವಾಗಿ ಕೆಲಸ ಮಾಡಬೇಕು’ ಎಂದರು.

ಪುರಸಭೆ ಕಚೇರಿ ವ್ಯವಸ್ಥಾಪಕ ಎಸ್.ಎನ್.ಪಾಟೀಲ ಮಾತನಾಡಿದರು. ಉಪ ತಹಶೀಲ್ದಾರ್ ಎಸ್.ಎಲ್.ಕಾಗಿಯವರ, ಕೆಎಲ್ಇ ಪ್ರೌಢಶಾಲೆಯ ಉಪಪ್ರಾಚಾರ್ಯ ಬಿ.ಎನ್.ಅರಕೇರಿ, ಸಮೂಹ ಸಂಪನ್ಮೂಲ ವ್ಯಕ್ತಿ ಎ.ಎಂ.ಮಂಚದ ಇದ್ದರು. ನಾವಲಗಿ ಕರ್ನಾಟಕ ಪಬ್ಲಿಕ್ ಶಾಲೆಯ ಸದಾಶಿವ ಮೇತ್ರಿ, ಬನಹಟ್ಟಿ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಎಂ.ಎಂ.ನಾಯಿಕವಾಡಿ, ಕುಲಹಳ್ಳಿ ಸರ್ಕಾರಿ ಪ್ರೌಢಶಾಲೆಯ ಶ್ರೀಶೈಲ ಅಲ್ಯಾಳ ಹಾಜರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260401-19-1995293606

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.