ಸೋಲಾಪುರ: ‘ಸುಪ್ರೀಂ ಕೋರ್ಟ್ ಆದೇಶದಂತೆ ಮಹಾರಾಷ್ಟ್ರದಲ್ಲಿ 2027ರ ಒಳಗೆ ಎಲ್ಲಾ ಶಿಕ್ಷಕರು ಟಿಇಟಿ (ಶಿಕ್ಷಕರ ಅರ್ಹತಾ ಪರೀಕ್ಷೆ) ಪಾಸಾಗುವುದು ಕಡ್ಡಾಯವಾಗಿದೆ. ಆದರೆ, ಮಹಾರಾಷ್ಟ್ರ ಸರ್ಕಾರ ಒಂದು ಕಡೆ ಪರೀಕ್ಷೆಯನ್ನು ಕಡ್ಡಾಯಗೊಳಿಸುತ್ತಿದ್ದರೆ, ಇನ್ನೊಂದೆಡೆ ಅಲ್ಪಸಂಖ್ಯಾತ ಕನ್ನಡ ಭಾಷಿಕ ಶಿಕ್ಷಕರ ಮೇಲೆ ಭಾಷಾ ಅನ್ಯಾಯ ಮಾಡುತ್ತಿದೆ’ ಎಂದು ಇಲ್ಲಿನ ‘ಆದರ್ಶ ಕನ್ನಡ ಬಳಗ'ದ ಅಧ್ಯಕ್ಷ ಮಲಿಕಜಾನ್ ಶೇಖ್ ಆರೋಪಿಸಿದ್ದಾರೆ.

‘ಕರ್ನಾಟಕದಲ್ಲಿ ಮರಾಠಿ ಭಾಷಿಕರಿಗೆ ಮರಾಠಿ ಭಾಷೆಯಲ್ಲೇ ಪ್ರಶ್ನೆಪತ್ರಿಕೆ ನೀಡಲಾಗುತ್ತದೆ, ಆದರೆ ಮಹಾರಾಷ್ಟ್ರದಲ್ಲಿ ಕನ್ನಡ ಭಾಷಿಕರಿಗೆ ಮರಾಠಿ ಅಥವಾ ಇಂಗ್ಲಿಷ್ನಲ್ಲಿ ಪರೀಕ್ಷೆ ಬರೆಯುವಂತೆ ಒತ್ತಾಯಿಸುತ್ತಿದ್ದಾರೆ‘ ಎಂದು ದೂರಿದ್ದಾರೆ.

‘ಪರೀಕ್ಷಾ ಪರಿಷತ್ತು ಅರ್ಜಿ ಸಲ್ಲಿಸುವಾಗ ‘ಕನ್ನಡ’ ಮಾಧ್ಯಮದ ಆಯ್ಕೆ ನೀಡುತ್ತದೆ. ಆದರೆ, ಪರೀಕ್ಷೆಯ ಸಮಯದಲ್ಲಿ ಪ್ರಶ್ನೆಪತ್ರಿಕೆಯು ಮರಾಠಿಮತ್ತು ಇಂಗ್ಲಿಷ್ ಭಾಷೆಯಲ್ಲಿ ಇರುತ್ತದೆ. ಇದರಿಂದ ಕನ್ನಡ ಮಾಧ್ಯಮದಲ್ಲಿ ಡಿ.ಇಡಿ., ಬಿ.ಇಡಿ ಪೂರೈಸಿದ ಅಭ್ಯರ್ಥಿಗಳಿಗೆ ಪ್ರಶ್ನೆಗಳನ್ನು ಅರ್ಥಮಾಡಿಕೊಳ್ಳುವುದು ಕಷ್ಟವಾಗು ತ್ತಿದೆ. ಭಾಷೆಯ ಈ ತಾಂತ್ರಿಕ ಅಡಚಣೆಯಿಂದಾಗಿ ಅರ್ಹರು ಅನುತ್ತೀರ್ಣ ರಾಗುತ್ತಿದ್ದಾರೆ’ ಎಂದು ಆರೋಪಿಸಿದ್ದಾರೆ.

‘ಅರ್ಹ ಶಿಕ್ಷಕರು ಲಭ್ಯವಾಗದಿದ್ದರೆ ಮುಂದಿನ ದಿನಗಳಲ್ಲಿ ಮಹಾರಾಷ್ಟ್ರದಲ್ಲಿ ಕನ್ನಡ ಶಾಲೆಗಳು ಮುಚ್ಚುವ ಭೀತಿ ಇದೆ. ಇದು ಗಡಿ ಭಾಗದ ಕನ್ನಡ ಸಂಸ್ಕೃತಿ ಮತ್ತು ಶಿಕ್ಷಣದ ಮೇಲೆ ಹೊಡೆತ ನೀಡಲಿದೆ. ಸರ್ಕಾರ ಕೂಡಲೇ ನಿರ್ಧಾರ ಕೈಗೊಳ್ಳದಿದ್ದರೆ ಹೋರಾಟ ಹಮ್ಮಿಕೊಳ್ಳಲಾಗುವುದು’ ಎಂದು ಕನ್ನಡ ಸಾಹಿತ್ಯ ಪರಿಷತ್ತು (ಮಹಾರಾಷ್ಟ್ರ ಘಟಕ) ಅಧ್ಯಕ್ಷ ಸೋಮಶೇಖರ್ ಜಮಶೆಟ್ಟಿ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.