ಬೆಂಗಳೂರು: ‘ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ದಕ್ಷಿಣ ಕನ್ನಡ ಜಿಲ್ಲೆಯಿಂದ ರಾಯಚೂರಿನ ಮಾನ್ವಿ ತಾಲ್ಲೂಕಿಗೆ ಮೂರನೇ ಬಾರಿಗೆ ಗಡಿಪಾರು ಮಾಡಿ ಹೊರಡಿಸಲಾಗಿರುವ ಆದೇಶವನ್ನು ಇದೇ 26ರವರೆಗೆ ಜಾರಿಗೊಳಿಸಬಾರದು’ ಎಂದು ಹೈಕೋರ್ಟ್ ಮಧ್ಯಂತರ ಆದೇಶ ಹೊರಡಿಸಿದೆ.

ಈ ಸಂಬಂಧ ಮಹೇಶ್ ಶೆಟ್ಟಿ ತಿಮರೋಡಿ ಸಲ್ಲಿಸಿರುವ ರಿಟ್ ಅರ್ಜಿಯನ್ನು ನ್ಯಾಯಮೂರ್ತಿ ಸಚಿನ್ ಶಂಕರ್ ಮಗದುಂ ಅವರಿದ್ದ ಏಕಸದಸ್ಯ ನ್ಯಾಯಪೀಠ ಮಂಗಳವಾರ ವಿಚಾರಣೆ ನಡೆಸಿತು.

ಅರ್ಜಿದಾರರ ಪರ ಹೈಕೋರ್ಟ್ ವಕೀಲ ಎಂ.ಆರ್.ಬಾಲಕೃಷ್ಣ ಅವರ ವಾದ ಆಲಿಸಿದ ನ್ಯಾಯಪೀಠ, ಮಹೇಶ್ ಶೆಟ್ಟಿ ತಿಮರೋಡಿ ವಿರುದ್ಧದ ಗಡಿಪಾರು ಆದೇಶವನ್ನು ಇದೇ 26ರವರಗೆ ಅನುಷ್ಠಾನಗೊಳಿಸದಂತೆ ಸರ್ಕಾರಕ್ಕೆ ನಿರ್ದೇಶಿಸಿತು.

ಪ್ರತಿವಾದಿಗಳಾದ ರಾಜ್ಯ ಗೃಹ ಇಲಾಖೆ ಕಾರ್ಯದರ್ಶಿ, ಪುತ್ತೂರು ಉಪ ವಿಭಾಗಾಧಿಕಾರಿ, ಬಂಟ್ವಾಳ ಉಪ ಪೊಲೀಸ್ ವರಿಷ್ಠಾಧಿಕಾರಿ ಮತ್ತು ಬೆಳ್ತಂಗಡಿ ಪೊಲೀಸ್ ಠಾಣೆಯ ಸಬ್ ಇನ್ಸ್ಪೆಕ್ಟರ್ಗೆ ನೋಟಿಸ್ ಜಾರಿಗೊಳಿಸಲು ಆದೇಶಿಸಿ ವಿಚಾರಣೆ ಮುಂದೂಡಿತು.

‘ಬೆಳ್ತಂಗಡಿಯ ವಿದ್ಯಾರ್ಥಿನಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹೋರಾಟ ನಡೆಸುವ ವಿಷಯದಲ್ಲಿ ಮಹೇಶ್ ಶೆಟ್ಟಿ ತಿಮರೋಡಿ ಸಾರ್ವಜನಿಕ ಸುವ್ಯವಸ್ಥೆಗೆ ಧಕ್ಕೆ ತಂದಿದ್ದಾರೆ’ ಎಂಬ ಆರೋಪದಡಿ ಅವರನ್ನು ದಕ್ಷಿಣ ಕನ್ನಡ ಜಿಲ್ಲೆಯಿಂದ ರಾಯಚೂರಿನ ಮಾನ್ವಿ ಪೊಲೀಸ್ ಠಾಣಾ ವ್ಯಾಪ್ತಿಗೆ ಆರು ತಿಂಗಳ ಕಾಲ ಗಡಿಪಾರು ಮಾಡಿ ಪುತ್ತೂರು ಉಪ ವಿಭಾಗಾಧಿಕಾರಿ ಮಾರ್ಚ್ 13ರಂದು (ಮೂರನೇ ಬಾರಿಗೆ) ಆದೇಶಿಸಿದ್ದರು.
.ಗಡಿಪಾರು ಪ್ರಶ್ನಿಸಿದ ಪ್ರಕರಣ: ಮಹೇಶ್ ತಿಮರೋಡಿ ಮೇಲ್ಮನವಿ ವಜಾ.ಗಡಿಪಾರು: ಮತ್ತೆ ಹೈಕೋರ್ಟ್ ಮೆಟ್ಟಿಲೇರಿದ ಸೌಜನ್ಯ ಪರ ಹೋರಾಟಗಾರ ತಿಮರೋಡಿ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.