ಮಳವಳ್ಳಿ: ‘ಮುದ್ರಾಂಕ ಇಲಾಖೆಯಿಂದ ಪರವಾನಗಿ ಪಡೆದ (ದಸ್ತು)ಪತ್ರ ಬರಹಗಾರರಿಗೆ ಪ್ರತ್ಯೇಕ ಲಾಗಿನ್ ನೀಡುವುದರ ಜೊತೆಗೆ ಪೇಪರ್ಲೆಸ್ ವ್ಯವಸ್ಥೆಯಲ್ಲಿ ಇರುವ ಲೋಪದೋಷಗಳನ್ನು ಸರಿಪಡಿಸಬೇಕು’ ಎಂದು ಪತ್ರಬರಹಗಾರ ಗಂಗರಾಜೇ ಅರಸ್ ಒತ್ತಾಯಿಸಿದರು.

ಪಟ್ಟಣದ ಪ್ರವಾಸಿ ಮಂದಿರದಲ್ಲಿ ಈಚೆಗೆ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ ಪೇಪರ್ಲೆಸ್ ವ್ಯವಸ್ಥೆ ವಿಶ್ವಾಸಾರ್ಹವಲ್ಲದಾಗಿದೆ. ಪೇಪರ್ಲೇಸ್ ವ್ಯವಸ್ಥೆಯಿಂದಾಗಿ ನಕಲಿ ದಾಖಲೆಗಳು ಸೃಷ್ಟಿಯಾಗಿ ಭೂ ಮಾಫಿಯಾ ಹೆಚ್ಚಾಗುವ ಸಾಧ್ಯತೆ ಇದೆ. ರಾಜ್ಯದಲ್ಲಿ ಇರುವ 25 ಸಾವಿರಕ್ಕೂ ಅಧಿಕ ಪತ್ರಬರಹಗಾರರು ಉದ್ಯೋಗ ಕಳೆದುಕೊಳ್ಳುವ ಆತಂಕ ಎದುರಾಗಿದೆ’ ಎಂದು ಅಳಲು ತೋಡಿಕೊಂಡರು.

‘ಸಾಮಾನ್ಯ ಜನರ ಆಸ್ತಿ ಭದ್ರತೆ ಗಂಭೀರ ಅಪಾಯಕ್ಕೆ ಸಿಲುಕಿದೆ. ವಿಶ್ವಾಸಾರ್ಹವಲ್ಲದ ಈ ವ್ಯವಸ್ಥೆಯ ಲೋಪದೋಷಗಳನ್ನು ಸರಿಪಡಿಸಲು ಹಲವಾರು ಬಾರಿ ಸರ್ಕಾರಕ್ಕೆ ಮನವಿ ಸಲ್ಲಿಸಿದರೂ ಯಾವುದೇ ಪ್ರಯೋಜನವಾಗಿಲ್ಲ. ಪತ್ರಬಹರಗಾರರ ಬೇಡಿಕೆಗಳಿಗೆ ಸ್ಪಂದಿಸದಿದ್ದರೆ ರಾಜ್ಯದಾದ್ಯಂತ ಹೋರಾಟವನ್ನು ಹಮ್ಮಿಕೊಳ್ಳಲಾಗುವುದು’ ಎಂದು ಎಚ್ಚರಿಸಿದರು.

ಹಿರಿಯ ಪತ್ರಬರಹಗಾರ ವಿ.ಬಿಳಿಗಿರಯ್ಯ ಮಾತನಾಡಿ, ‘ಮುದ್ರಾಂಕ ಇಲಾಖೆಯಿಂದ ಪರವಾನಗಿ ಪಡೆದ ಪತ್ರಬರಹಗಾರರು ಅಧಿಕೃತವಾಗಿ ಲೈಸೆನ್ಸ್ ಪಡೆದುಕೊಂಡು ಪ್ರತಿಯೊಂದು ವರ್ಷವೂ ಪರಿಷ್ಕರಣೆ ಮಾಡಿಸಿಕೊಂಡು ಬರುತ್ತಿದ್ದೇವೆ. ಪೇಪರ್ಲೆಸ್ ಮಾಡುವುದರಲ್ಲಿ ಯಾವುದೇ ಅಭ್ಯಂತರವಿಲ್ಲ. ಆದರೆ ಪತ್ರಬರಹಗಾರರಿಗೆ ಸೇವಾ ಭದ್ರತೆ ಒದಗಿಸಬೇಕು’ ಎಂದು ಆಗ್ರಹಿಸಿದರು.

ಪತ್ರಬರಹಗಾರರಾದ ವಿಜಯ್ ಕುಮಾರ್, ಉಮೇಶ್ ರಾಜೇಅರಸ್, ಸದಾಶಿವಮೂರ್ತಿ, ವೆಂಟಕಸ್ವಾಮಿ, ಶ್ರೀನಿವಾಸ್ಗೌಡ, ಸುಭ್ರಮಣ್ಯರಾಜೇ ಅರಸ್, ಶಿವಕುಮಾರ್ ಪಾಲ್ಗೊಂಡಿದ್ದರು

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260509-40-393922588

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.