ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಮಾಲ್‌ ಆಫ್‌ ಏಷ್ಯಾ: ಆದೇಶ ವಿಸ್ತರಣೆ

Published 5 ಜನವರಿ 2024, 23:41 IST
Last Updated 5 ಜನವರಿ 2024, 23:41 IST
ಅಕ್ಷರ ಗಾತ್ರ

ಬೆಂಗಳೂರು: ಮಾಲ್ ಆಫ್ ಏಷ್ಯಾದಲ್ಲಿ ವಾಹನ ನಿಲುಗಡೆ ಕುರಿತಂತೆ ಎದುರಾಗಿದ್ದ ಸಮಸ್ಯೆಗಳನ್ನು ಬಗೆಹರಿಸುವ ನಿಟ್ಟಿನಲ್ಲಿ ಕೈಗೊಳ್ಳಲಾಗಿರುವ ಕ್ರಮಗಳ ಬಗ್ಗೆ ಹೈಕೋರ್ಟ್‌ಗೆ ಮಾಹಿತಿ ನೀಡಲಾಯಿತು.

2023ರ ಡಿಸೆಂಬರ್ 31ರಿಂದ 2024ರ ಜನವರಿ 15ರವರೆಗೆ ಸಾರ್ವಜನಿಕರಿಗೆ ಪ್ರವೇಶ ನಿರ್ಬಂಧಿಸಿ ನಗರ ಪೊಲೀಸ್ ಆಯುಕ್ತರು ಹೊರಡಿಸಿದ್ದ ಆದೇಶ ಪ್ರಶ್ನಿಸಿ ಸ್ಪಾರ್ಕಲ್ ಒನ್ ಮಾಲ್ ಡೆವಲಪರ್ಸ್ ಪ್ರೈವೇಟ್ ಲಿಮಿಟೆಡ್ ಕಂಪನಿ ಸಲ್ಲಿಸಿರುವ ಅರ್ಜಿಯನ್ನು ಏಕಸದಸ್ಯ ನ್ಯಾಯಪೀಠ ಶುಕ್ರವಾರ ವಿಚಾರಣೆ ನಡೆಸಿತು.

ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲರು, ‘ದ್ವಿಚಕ್ರ ವಾಹನಗಳ ಪ್ರವೇಶ ಶುಲ್ಕ ಕಡಿತಗೊಳಿಸಲು ಸೂಚಿಸಲಾಗಿದೆ. ಕ್ಯಾಬ್, ಆಟೊ ರಿಕ್ಷಾಗಳ ಪಿಕ್‌ ಅಪ್, ಡ್ರಾಪ್ ಪಾಯಿಂಟ್ ಬದಲಾವಣೆ ಮಾಡಲಾಗಿದೆ. ಮಾಲ್‌ನ ಉದ್ಯೋಗಿಗಳ ವಾಹನ ಪಾರ್ಕಿಂಗ್‌ಗೆ ರಿಯಾಯಿತಿ ದರದ ಪಾಸ್ ವ್ಯವಸ್ಥೆ ಮಾಡಲಾಗಿದೆ. ವಾಹನಗಳ ಭದ್ರತಾ ಚೆಕಿಂಗ್ ಪಾಯಿಂಟ್ ಬದಲಾವಣೆ ಮಾಡಿ ಪ್ರೀ ಪೇಯ್ಡ್ ಆಟೊ ರಿಕ್ಷಾ ನಿಲ್ದಾಣ ಸ್ಥಾಪಿಸಲು ಕ್ರಮ ಕೈಗೊಳ್ಳಲಾಗಿದೆ‘ ಎಂದು ತಿಳಿಸಿದರು.

ಇದನ್ನು ಆಲಿಸಿದ ನ್ಯಾಯಪೀಠ, ಪರಿಹಾರ ಕ್ರಮಗಳ ಜಾರಿ ಬಗ್ಗೆ ಇದೇ 30ಕ್ಕೆ ವಿವರವಾದ ವರದಿ ಸಲ್ಲಿಸುವಂತೆ ಸೂಚಿಸಿ ವಿಚಾರಣೆ ಮುಂದೂಡಿತು. ಅಲ್ಲಿಯವರೆಗೂ ಮಾಲ್ ಆಫ್ ಏಷ್ಯಾ ವಿರುದ್ಧ ಬಲವಂತದ ಕ್ರಮ ಜರುಗಿಸದಂತೆ ನಗರ ಪೊಲೀಸ್ ಆಯುಕ್ತರಿಗೆ ನೀಡಿದ್ದ ನಿರ್ದೇಶನವನ್ನು ವಿಸ್ತರಿಸಿ ಆದೇಶಿಸಿತು. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT