ಔರಾದ್: ಬಿಜೆಪಿ ಹಾಗೂ ಆರ್ಎಸ್ಎಸ್ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿರುವ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಮೊಕದ್ದಮೆ ದಾಖಲಿಸಿ ಬಂಧಿಸುವಂತೆ ಆಗ್ರಹಿಸಿ ಜಿಲ್ಲಾ ಬಿಜೆಪಿ ಮುಖಂಡರು ಇಲ್ಲಿಯ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ಬಿಜೆಪಿ ಜಿಲ್ಲಾಧ್ಯಕ್ಷ ಸೋಮನಾಥ ಪಾಟೀಲ, ಪಕ್ಷದ ಯುವ ಮೋರ್ಚಾ ಜಿಲ್ಲಾ ಉಪಾಧ್ಯಕ್ಷ ಬಸವರಾಜ ಹಳ್ಳೆ, ಪ್ರಧಾನ ಕಾರ್ಯದರ್ಶಿ ಪೀರಪ್ಪ ಔರಾದೆ, ಕಿರಣ ಪಾಟೀಲ ನೇತೃತ್ವದಲ್ಲಿ ಗುರುವಾರ ಇಲ್ಲಿಯ ಪೊಲೀಸ್ ಠಾಣೆಗೆ ಭೇಟಿ ನೀಡಿ ದೂರು ಸಲ್ಲಿಸಿದರು.

‘ಮಲ್ಲಿಕಾರ್ಜುನ ಖರ್ಗೆ ಅವರು ಆಸ್ಸಾಂನಲ್ಲಿ ನಡೆದ ಪ್ರಚಾರ ಸಭೆಯಲ್ಲಿ ಹೇಳಿರುವ ಹೇಳಿಕೆ ಸಮಾಜದಲ್ಲಿ ಬೆಂಕಿ ಹಚ್ಚಿ ಅಶಾಂತಿ ಉಂಟು ಮಾಡುವಂತಿದೆ. ಇವರ ಪ್ರಚೋದನಕಾರಿ ಹೇಳಿಕೆ ಸಂವಿಧಾನದ ವಿರುದ್ಧವಾಗಿದೆ. ಅಲ್ಪಸಂಖ್ಯಾತರ ಓಲೈಕೆಗಾಗಿ ಎಐಸಿಸಿ ಅಧ್ಯಕ್ಷರು ನೀಡಿದ ಹೇಳಿಕೆ ದೇಶಾದ್ಯಂತ ಇರುವ ಬಿಜೆಪಿ ಹಾಗೂ ಆರ್ಎಸ್ಎಸ್ ಕಾರ್ಯಕರ್ತರಿಗೆ ಅಪಾಯವೊಡ್ಡಲಿದೆ. ಪೊಲೀಸರು ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಬೇಕು’ ಎಂದು ಒತ್ತಾಯಿಸಿದರು.

ಮುಖಂಡ ರಾಜಶೇಖರ ನಾಗಮೂರ್ತಿ, ಅರಹಂತ ಸಾವಳೆ, ರಾಮಶೆಟ್ಟಿ ಪನ್ನಾಳೆ, ಶಿವರಾಜ ಅಲ್ಮಾಜೆ, ಖಂಡೋಬಾ ಪಾಟೀಲ, ಶಿವಾನಂದ ವಡ್ಡೆ, ಶರತ್, ಪ್ರವೀಣ ಕಾರಬಾರಿ, ಸಂದೀಪ ಪಾಟೀಲ, ಸಲ್ಲಾವುದ್ದಿನ್ ಮತ್ತಿತರರು ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260411-33-752036127

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.