ಬೆಂಗಳೂರು: ಎಐಸಿಸಿ ಅಧ್ಯಕ್ಷರೂ ಆಗಿರುವ, ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ಅನಾರೋಗ್ಯದಿಂದ ಬೆಂಗಳೂರಿನ ಎಂ.ಎಸ್ ರಾಮಯ್ಯ ಆಸ್ಪತ್ರೆಗೆ ದಾಖಲಾಗಿದ್ದಾರೆ.
.'ಕಾಣೆಯಾದವರ ಪ್ರಕಟಣೆ' ಎಂಬ ಬಿಜೆಪಿ ಟೀಕೆಗೆ ಸಚಿವ ಪ್ರಿಯಾಂಕ್ ಖರ್ಗೆ ತಿರುಗೇಟು.
ಇದನ್ನು ಅವರ ಪುತ್ರ, ಕರ್ನಾಟಕ ಸರ್ಕಾರದ ಸಚಿವ ಪ್ರಿಯಾಂಕ್ ಖರ್ಗೆ ‘ಎಕ್ಸ್’ ಪೋಸ್ಟ್ ಮೂಲಕ ತಿಳಿಸಿದ್ದಾರೆ.

ಖರ್ಗೆ ಅವರಿಗೆ ಪೇಸ್ಮೇಕರ್ ಅಳವಡಿಸಲು ಸೂಚಿಸಲಾಗಿದೆ. ಶಸ್ತ್ರಚಿಕಿತ್ಸೆಗಾಗಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರ ಆರೋಗ್ಯ ಸ್ಥಿರವಾಗಿದೆ. ನಿಮ್ಮೆಲ್ಲರ ಕಾಳಜಿ ಮತ್ತು ಹಾರೈಕೆಗೆ ಧನ್ಯವಾದಗಳು ಎಂದು ಅವರು ಬರೆದುಕೊಂಡಿದ್ದಾರೆ.

ಗುರುವಾರ ಖರ್ಗೆ ಅವರನ್ನು ಆಸ್ಪತ್ರೆಯಲ್ಲಿ ಭೇಟಿಯಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಗ್ಯ ವಿಚಾರಿಸಿ, ಶೀಘ್ರ ಗುಣಮುಖರಾಗುವಂತೆ ಹಾರೈಸಿದ್ದಾರೆ.
.ಬಿಹಾರ ಚುನಾವಣೆ | ಮೋದಿ ಸರ್ಕಾರದ ಅಂತ್ಯಕ್ಕೆ ಮುನ್ನುಡಿ: ಮಲ್ಲಿಕಾರ್ಜುನ ಖರ್ಗೆ .

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.