ಬೀದರ್: ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ನಲ್ಲಿ ವರ್ಷದ ಹಿಂದೆ ನಡೆದ ಉಗ್ರರ ದಾಳಿಯಂತ ಘಟನೆಗಳು ಮತ್ತೆ ಮರುಕಳಿಸದಂತೆ ನೋಡಿಕೊಳ್ಳಬೇಕಿದೆ ಎಂದು ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಹೇಳಿದರು.

ಭಾಲ್ಕಿಯ ಹೆಲಿಪ್ಯಾಡ್ನಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಪಹಲ್ಗಾಮ್ ದಾಳಿಗೆ ಭಾರತೀಯ ಸೈನಿಕರು ಪ್ರತ್ಯುತ್ತರ ನೀಡಿದ್ಧಾರೆ. ಆ ಘಟನೆ ನಡೆಯಬಾರದಿತ್ತು. ನಡೆದು ಹೋಗಿದೆ. ಭವಿಷ್ಯದಲ್ಲಿ ಇಂಥ ಘಟನೆಗಳು ಆಗಬಾರದು ಎಂದರು.

ಪ್ರವಾಸೋದ್ಯಮ ದೃಷ್ಟಿಯಿಂದ ಪಹಲ್ಗಾಮ್ನಂಥ ಘಟನೆಗಳು ಆಗಬಾರದು. ಅಮಾಯಕ ಜನರ ಮೇಲೆ ದಾಳಿ ನಡೆಸುವುದು ಸರಿಯಲ್ಲ ಎಂದು ಹೇಳಿದರು.

'ಮೋದಿ ಒಬ್ಬ ಭಯೋತ್ಪಾದಕ’ ಎಂಬ ವಿಚಾರದ ಬಗ್ಗೆ ಈಗಾಗಲೇ ಹೇಳಿದ್ದೇನೆ. ಪರೋಕ್ಷವಾಗಿ ಮೋದಿಗೆ ನಾನು ಈ ಅರ್ಥದಲ್ಲಿ ಹೇಳಿಲ್ಲ ಎಂದ ಅವರು, ರಾಜ್ಯದಲ್ಲಿ ಸಚಿವ ಸಂಪುಟ ಪುನರ್ ರಚನೆಯ ವಿಚಾರ ಸಿಎಂ ಅವರನ್ನೇ ಕೇಳಬೇಕು ಎಂದು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.