ಚಿತ್ರದುರ್ಗ: ಹಿರಿಯೂರು ನಗರದ 63 ವರ್ಷದ ವ್ಯಕ್ತಿಯೊಬ್ಬರು ಕೋವಿಡ್ನಿಂದ ಮೃತಪಟ್ಟಿದ್ದಾರೆ.
ಕೋವಿಡ್ ದೃಢಪಟ್ಟಿದ್ದರಿಂದ ಸೋಮವಾರ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ ಅವರು ರಾತ್ರಿ ಮೃತಪಟ್ಟಿದ್ದಾರೆ ಎಂದು ಜಿಲ್ಲಾಧಿಕಾರಿ ಆರ್.ವಿನೋತ್ ಪ್ರಿಯಾ ತಿಳಿಸಿದ್ದಾರೆ.
ಜಿಲ್ಲೆಯಲ್ಲಿ ಕೋವಿಡ್ ನಿಂದ ಮೃತಪಟ್ಟವರ ಸಂಖ್ಯೆ ಏಳಕ್ಕೆ ಏರಿದೆ.