ಸೋಮವಾರ, 6 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಎಲ್ಲಾ ಶಾಲೆಗಳಲ್ಲಿ ನಾಡಗೀತೆ ಹಾಡುವುದು ಕಡ್ಡಾಯ: ಸರ್ಕಾರದ ತಿದ್ದುಪಡಿ ಆದೇಶ

Published 21 ಫೆಬ್ರುವರಿ 2024, 9:59 IST
Last Updated 21 ಫೆಬ್ರುವರಿ 2024, 9:59 IST
ಅಕ್ಷರ ಗಾತ್ರ

ಬೆಂಗಳೂರು: ಎಲ್ಲಾ ಶಾಲೆಗಳಲ್ಲಿ (ಸರ್ಕಾರಿ, ಅನುದಾನಿತ, ಅನುದಾನ ರಹಿತ ಮತ್ತು ಖಾಸಗಿ) ನಾಡಗೀತೆಯನ್ನು ದೈನಂದಿನ ಚಟುವಟಿಕೆಗಳು ಆರಂಭವಾಗುವ ಮುನ್ನ ಹಾಡುವುದನ್ನು ಕಡ್ಡಾಯಗೊಳಿಸಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಆದೇಶ ಹೊರಡಿಸಿದೆ.

ಆದೇ ರೀತಿ ಸರ್ಕಾರದ ಇಲಾಖೆಗಳು ಹಾಗೂ ನಿಗಮ, ಮಂಡಳಿ, ಪ್ರಾಧಿಕಾರ ಮುಂತಾದ ಅರೆ ಸರ್ಕಾರಿ ಸಂಸ್ಥೆಗಳು ಅಧಿಕೃತ ಕಾರ್ಯಕ್ರಮಗಳನ್ನು ಆಯೋಜಿಸುವ ಪ್ರಾರಂಭದಲ್ಲಿ ನಾಡಗೀತೆಯನ್ನು ಹಾಡಬೇಕೆಂದು ಸರ್ಕಾರ ತಿದ್ದುಪಡಿ ಆದೇಶದಲ್ಲಿ ತಿಳಿಸಿದೆ.

ಇದಕ್ಕೂ ಮುನ್ನ 2024ರ ಜನವರಿ 7ರಂದು ಹೊರಡಿಸಿದ್ದ ಆದೇಶದಲ್ಲಿ ‘ಎಲ್ಲಾ ಶಾಲೆಗಳಲ್ಲಿ ನಾಡಗೀತೆಯನ್ನು ದೈನಂದಿನ ಚಟುವಟಿಕೆಗಳು ಆರಂಭವಾಗುವ ಮುನ್ನ ಹಾಗೂ ಸರ್ಕಾರದ ಇಲಾಖೆಗಳು ಹಾಗೂ ನಿಗಮ, ಮಂಡಳಿ, ಪ್ರಾಧಿಕಾರ ಮುಂತಾದ ಅರೆ ಸರ್ಕಾರಿ ಸಂಸ್ಥೆಗಳ ಅಧಿಕೃತ ಕಾರ್ಯಕ್ರಮಗಳನ್ನು ಆಯೋಜಿಸುವ ಪ್ರಾರಂಭದಲ್ಲಿ ಹಾಡಬೇಕು’ ಎಂದು ತಿಳಿಸಲಾಗಿತ್ತು. ಆದರೆ ಯಾವ ಶಾಲೆಗಳೆಂದು ನಿರ್ದಿಷ್ಟವಾಗಿ ಹೇಳಿರಲಿಲ್ಲ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT