ಪಾಂಡವಪುರ: ಅಂಗನವಾಡಿ ಮತ್ತು ಆಶಾ ಕಾರ್ಯಕರ್ತೆಯರಿಗೆ 2026–27ನೇ ಹಣಕಾಸು ವರ್ಷದಲ್ಲಾದರೂ ಗೌರವ ಧನ ಹೆಚ್ಚಿಸಿ ಎಂದು ಮೇಲುಕೋಟೆ ವಿಧಾನಸಭಾ ಕ್ಷೇತ್ರದ ಶಾಸಕ ದರ್ಶನ್ ಪುಟ್ಟಣ್ಣಯ್ಯ ಈಚೆಗೆ ಸದನದಲ್ಲಿ ಸರ್ಕಾರವನ್ನು ಒತ್ತಾಯಿಸಿದರು.

ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯರ ಅಮೂಲ್ಯ ಸೇವೆಯನ್ನು ಗಮನದಲ್ಲಿಟ್ಟುಕೊಂಡು 2026–27ನೇ ಸಾಲಿನ ಹಣಕಾಸು ವರ್ಷದಲ್ಲಿ ಅವರ ವೇತನವನ್ನು ಹೆಚ್ಚಿಸಲು ಸರ್ಕಾರ ಕ್ರಮಕೈಗೊಳ್ಳುವುದೇ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರನ್ನು ಪ್ರಶ್ನಿಸಿದರು.

‘ಅಂಗನವಾಡಿ ಕಾರ್ಯಕರ್ತೆಯರು, ಮಹಿಳೆಯರು, ಅಂಗನವಾಡಿ ಮಕ್ಕಳ ಪೋಷಣೆ ಹಾಗೂ ಮಕ್ಕಳು ಮತ್ತು ಗರ್ಭೀಣಿಯರ ಆರೋಗ್ಯಕ್ಕೆ ಸಂಬಂಧ ಮನೆ ಮನೆಗಳಿಗೆ ಯೋಜನೆಗಳನ್ನು ತಲುಪುವಂತೆ ಕೆಲಸ ಮಾಡುತ್ತಾರೆ. ಇವರಿಗೆ ಸಂಬಳ ಹೆಚ್ಚುಳ ಮತ್ತು ಆರೋಗ್ಯ ಭದ್ರತೆಯನ್ನು ಒದಗಿಸಬೇಕು’ ಎಂದು್ಮನವಿ ಮಾಡಿದರು.

ಮನವಿಗೆ ಔರಾದ್ ಶಾಸಕ ಪ್ರಭು ಚವ್ವಾಣ್ , ಬಸವ ಕಲ್ಯಾಣ ಶಾಸಕ ಶರಣು ಸಲಗರ ದನಿಗೂಡಿಸಿದರು.

ದರ್ಶನ್ ಪುಟ್ಟಣ್ಣಯ್ಯ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್, ‘ಆಶಾ, ಅಂಗನವಾಡಿ ಕಾರ್ಯಕರ್ತೆಯರ ಗೌರವ ಧನ ಹೆಚ್ಚಳ ಮಾಡಬೇಕು ನಿಜ. ನಾನು ಬಹಳ ಹೆಮ್ಮೆಯಿಂದ ಹೇಳಲು ಬಯಸುವುದೇನೆಂದರೆ, ಕರ್ನಾಟಕ ರಾಜ್ಯ ಇಡೀ ದೇಶದಲ್ಲಿ ಅತ್ಯಧಿಕ ಗೌರವ ಧನವನ್ನು ಕೊಡುತ್ತಿದೆ. ಹರಿಯಾಣ, ಕೇರಳ, ತೆಲಂಗಾಣ ನಂತರ ನಮ್ಮ ರಾಜ್ಯವಿದೆ ಎಂದರು.

ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಗ್ ಖರ್ಗೆ ಮಾತನಾಡಿ, ‘ಅಂಗನವಾಡಿ ಕಾರ್ಯಕರ್ತೆಯರಿಗೆ ₹12ಸಾವಿರ ತಿಂಗಳ ಗೌರವ ಧನ ನೀಡಲಾಗುತ್ತಿದೆ. ಇದರಲ್ಲಿ ರಾಜ್ಯದ ಪಾಲು ₹ 9,300. ಆಶಾ ಕಾಯಕರ್ತೆಯರಿಗೆ ತಿಂಗಳ ಗೌರವ ಧನ ₹8ಸಾವಿರ, ಇದರಲ್ಲಿ ರಾಜ್ಯದ ಪಾಲು ₹6ಸಾವಿರ. ಕೇಂದ್ರದ ಪಾಲು ₹2ಸಾವಿರ. ಅದೇ ರೀತಿ ಬಿಸಿಯೂಟದ ಕಾರ್ಯಕರ್ತೆಯರಿಗೆ ₹4ಸಾವಿರ ಗೌರವಧನ ನೀಡಲಾಗುತ್ತದೆ’ ಎಂದು ತಿಳಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260324-40-2117091282

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.