ಮಂಡ್ಯ: ಬಿಜೆಪಿ ಶಾಸಕರು ಮತ್ತು ಮುಖಂಡರ ಬಗ್ಗೆ ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವಹೇಳನಕಾರಿಯಾಗಿ ಮಾತನಾಡಿದ್ದಾರೆ. ಇವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಬಿಜೆಪಿ ಕಾರ್ಯಕರ್ತರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿಗೆ ಗುರುವಾರ ಮನವಿ ಸಲ್ಲಿಸಿದರು.

ನಗರದ ಪೊಲೀಸ್ ಭವನದಲ್ಲಿ ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಸ್.ಇ. ಗಂಗಾಧರಸ್ವಾಮಿ ಅವರನ್ನು ಗುರುವಾರ ಭೇಟಿಯಾಗಿ ಬಿಜೆಪಿ ಕಾರ್ಯಕರ್ತರು ಮನವಿ ಸಲ್ಲಿಸಿದರು.

ದಾವಣಗೆರೆ ವಿಧಾನಸಭೆ ಉಪಚುನಾವಣೆಯ ಕಾಂಗ್ರೆಸ್ ಪಕ್ಷದ ಪ್ರಚಾರ ಸಭೆಯಲ್ಲಿ ಪ್ರದೀಪ್ ಈಶ್ವರ್ ಅವರು ಬಿಜೆಪಿ ಮುಖಂಡರ ಬಗ್ಗೆ ಲಘುವಾಗಿ ಮಾತನಾಡಿದ್ದಾರೆ. ಒಂದು ಧರ್ಮದವರನ್ನು ಓಲೈಸುತ್ತಾ, ಬಾಯಿಗೆ ಬಂದ ಹಾಗೆ ಮಾತನಾಡಿದ್ದಾರೆ. ಇವರ ವಿರುದ್ಧ ಪ್ರಕರಣ ದಾಖಲಿಸಿಕೊಂಡು, ಕಾನೂನು ಕ್ರಮ ಜರುಗಿಸಬೇಕು. ಇಲ್ಲದಿದ್ದರೆ ಸಮಾಜದ ಸ್ವಾಸ್ತ್ಯ ಹಾಳಾಗುತ್ತದೆ ಎಂದು ಆಗ್ರಹಿಸಿದರು.

ಮುಖಂಡರಾದ ಎಸ್.ಶಿವಕುಮಾರ್ ಆರಾಧ್ಯ, ಹೊಸಹಳ್ಳಿ ಶಿವು, ಮಾದರಾಜೇ ಅರಸ್, ಆನಂದ್, ಯೋಗೇಶ್, ಪ್ರಸನ್ನಕುಮಾರ್, ಸವಿತಾ, ಮಹಾಂತಪ್ಪ, ಅಯ್ಯಪ್ಪ, ಶಿವಲಿಂಗಯ್ಯ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260327-40-1556631002

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.