ಮದ್ದೂರು: ‘ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ಸಲ್ಲಿಸುವುದನ್ನು ಎಲ್ಲರೂ ನಿರೀಕ್ಷೆ ಮಾಡಿದ್ದರು. ಇದು ಶಾಕಿಂಗ್ ಸುದ್ದಿ ಏನಲ್ಲ’ ಎಂದು ಬಿಜೆಪಿ ಮುಖಂಡರಾದ ಸುಮಲತಾ ಅಂಬರೀಷ್ ಹೇಳಿದರು.

ನಟ ದಿವಂಗತ ಅಂಬರೀಷ್ ಅವರ ಜನ್ಮದಿನದ ನಿಮಿತ್ತ ಅಂಬರೀಷ್ ಅವರ ಸ್ವಗ್ರಾಮ, ತಾಲ್ಲೂಕಿನ ಭಾರತೀನಗರದ ಬಳಿಯ ದೊಡ್ಡರಸಿನಕೆರೆ ಗ್ರಾಮಕ್ಕೆ ಶುಕ್ರವಾರ ಹೋಗುವಾಗ ಮಾರ್ಗಮಧ್ಯೆ ನಗರದ ಪ್ರವಾಸಿ ಮಂದಿರದಲ್ಲಿ ಭೇಟಿಯಾದ ಸುದ್ದಿಗಾರರೊಂದಿಗೆ ಮಾತನಾಡಿದರು.

ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ವಿಷಯದಲ್ಲಿ ಎರಡು ವರ್ಷದಿಂದ ಚರ್ಚೆ ನಡೆಯುತ್ತಿದೆ. ಇದೇನು ಅನಿರೀಕ್ಷಿತ ಅಥವಾ ಶಾಕಿಂಗ್ ಸುದ್ದಿ ಏನಲ್ಲ. ಯಾರೇ ಮುಂದಿನ ಮುಖ್ಯಮಂತ್ರಿಯಾದರೂ ಜನಪರ ಆಡಳಿತ ನೀಡಬೇಕೆಂದು ರಾಜ್ಯದ ಜನರು ನಿರೀಕ್ಷೆ ಮಾಡುತ್ತಿದ್ದಾರೆ ಎಂದರು.

ದಲಿತ ಮುಖ್ಯಮಂತ್ರಿ ಬಗ್ಗೆಯೂ ವಿಚಾರ ಹರಿದಾಡುತ್ತಿರುವ ಬಗ್ಗೆ ಕೇಳಿದ ಪ್ರಶ್ನೆಗೆ, ಕಾಂಗ್ರೆಸ್ ಪಕ್ಷ ಹಿಂದುಳಿದ ವರ್ಗ ಹಾಗೂ ಅಲ್ಪ ಸಂಖ್ಯಾತರ ಪಕ್ಷ ಅಂತ ಹೇಳಿಕೊಳ್ಳುತ್ತದೆ. ಹೀಗಾಗಿ ಅದನ್ನು ಉಳಿಸಿಕೊಳ್ಳೋದು ಬಿಡೋದು ಅವರಿಗೆ ಬಿಟ್ಟದ್ದು ಎಂದರು.

‘ರಾಜ್ಯ ಸರ್ಕಾರ ಅವಧಿ ಪೂರ್ಣಗೊಳಿಸುತ್ತೋ ಏನೋ ಗೊತ್ತಿಲ್ಲ. ನಾಯಕತ್ವ ಬದಲಾವಣೆ ಹೊಸದಲ್ಲ ಹಾಗೂ ತಪ್ಪಲ್ಲ. ಜನರು ಇದನ್ನು ಹೇಗೆ ಸ್ವೀಕರಿಸುತ್ತಾರೆ ಎಂಬುದನ್ನು ಕಾದು ನೋಡಬೇಕು’ ಎಂದರು.

‘ಅಂಬರೀಷ್ ಅವರ ಬಗ್ಗೆ ಈಗಲೂ ಜಿಲ್ಲೆಯ ಜನರಿಗೆ ಹಾಗೂ ಅಭಿಮಾನಿಗಳಿಗೆ ಪ್ರೀತಿ, ಗೌರವ ಹಾಗೂ ಅಭಿಮಾನ ಕಡಿಮೆಯಾಗಿಲ್ಲ, ಹಾಗೆಯೇ ಇದೆ’ ಎಂದರು.

‘ಪುತ್ರ ಅಭಿಷೇಕ್ ರಾಜಕೀಯ ಪ್ರವೇಶದ ಬಗ್ಗೆ ನಾನು ನಿರ್ಧಾರ ಮಾಡಲ್ಲ. ರಾಜಕೀಯ ಅಥವಾ ಸಿನಿಮಾ ರಂಗ ಎರಡರಲ್ಲಿ ಯಾವುದಾನ್ನಾದರೂ ಆಯ್ಕೆ ಮಾಡಿಕೊಳ್ಳುವುದು ಅಭಿಷೇಕ್ಗೆ ಬಿಟ್ಟ ವಿಚಾರ’ ಎಂದರು.

‘ಈಗ ನಾನು ಬಿಜೆಪಿ ಪಕ್ಷದಲ್ಲಿ ಇದ್ದೇನೆ. ಪಕ್ಷವು ಏನು ಸೂಚನೆ ನೀಡುತ್ತದೆ ಆ ಪ್ರಕಾರ ಪಕ್ಷದ ಸಂಘಟನೆ ವಿಷಯದಲ್ಲಿ ನಡೆದುಕೊಳ್ಳುತ್ತೇನೆ’ ಎಂದರು.

ಮುಖಂಡರಾದ ಹನಕೆರೆ ಶಶಿ, ಬೇಲೂರು ಸೋಮಶೇಖರ್ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260530-40-1599941377

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.