ಮಂಡ್ಯ: ಪರಿಶಿಷ್ಟ ಜಾತಿಗಳ ಒಳ ಮೀಸಲಾತಿ ಹೆಸರಿನಲ್ಲಿ ದಲಿತ ಸಮುದಾಯ ಒಡೆಯುವ ಹುನ್ನಾರವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ನಡೆಸುತ್ತಿದ್ದಾರೆ ಎಂದು ದಲಿತ ಸಂಘರ್ಷ ಸಮಿತಿ (ಪ್ರೊ.ಬಿ.ಕೃಷ್ಣಪ್ಪ ಬಣ) ಅಧ್ಯಕ್ಷ ವೆಂಕಟಗಿರಿಯಯ್ಯ ಆರೋಪಿಸಿದರು.

ಉದ್ದೇಶಪೂರ್ವಕವಾಗಿಯೇ ಈ ಹುನ್ನಾರ ಹೆಣೆದಿರುವ ಮುಖ್ಯಮಂತ್ರಿ ನಡೆಯನ್ನು ತೀವ್ರವಾಗಿ ಖಂಡಿಸುತ್ತೇವೆ. ನೆರೆಯ ಆಂಧ್ರಪ್ರದೇಶದಲ್ಲಿ ಒಳ ಮೀಸಲಾತಿಗಾಗಿ ಸಂಘರ್ಷ ಅತಿರೇಕಕ್ಕೆ ತಿರುಗಿದೆ. ಒಬ್ಬರನ್ನೊಬ್ಬರು ಹೊಡೆದಾಡಿಕೊಳ್ಳುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಪತ್ರಿಕಾಗೋಷ್ಠಿಯಲ್ಲಿ ಮಂಗಳವಾರ ಕಿಡಿಕಾರಿದರು.

ಪರಿಶಿಷ್ಟ ಜಾತಿಗಳ ಒಳ ಮೀಸಲಾತಿ ನೀತಿ ಜಾರಿ ಹೋರಾಟ ನೆಪವಾಗಿಟ್ಟುಕೊಂಡು ಮುಖ್ಯಮಂತ್ರಿ ಸಿದ್ದರಾಮಯ್ಯ ಸಮುದಾಯವನ್ನು ವಂಚಿಸುವ ಹುನ್ನಾರ ರೂಪಿಸಿದ್ದಾರೆ. ಏಕೆಂದರೆ ಬ್ಯಾಕ್ಲಾಗ್ ಹುದ್ದೆಗಳನ್ನು ಭರ್ತಿ ಮಾಡಲು ರಾಜ್ಯ ಸರ್ಕಾರದ ಬಳಿ ಹಣವಿಲ್ಲ ಎಂದರು.

ಸಮಿತಿಯ ಕೆ.ಎಂ.ಅನಿಲ್ಕುಮಾರ್, ಬಿ.ಆನಂದ್, ಜಿ.ಸುಶ್ಮಿತಾ, ಸುರೇಶ್ ಕುಮಾರ್, ಸ್ವಾಮಿ, ವಿಮಲಾ, ಕೆ.ಗೀತಾ ಮುತ್ತುರಾಜ್, ಗೀತಾ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260325-40-186965516

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.